ಪ್ರಧಾನ ಮಂತ್ರಿಯವರ ಕಛೇರಿ
ಹೆಣ್ಣುಮಕ್ಕಳ ಮೌಲ್ಯ ಮತ್ತು ಶಕ್ತಿಯನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
22 JAN 2026 9:26AM by PIB Bengaluru
ಹೆಣ್ಣುಮಕ್ಕಳನ್ನು ಲಕ್ಷ್ಮಿ ಎಂದು ಗೌರವಿಸುವ ದೇಶದಲ್ಲಿ 11 ವರ್ಷಗಳ ಹಿಂದೆ ಇದೇ ದಿನದಂದು ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನವನ್ನು ಪ್ರಾರಂಭಿಸಲಾಯಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಇಂದು ಭಾರತದ ಹೆಣ್ಣುಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ರಾಷ್ಟ್ರದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.
ಹೆಣ್ಣುಮಕ್ಕಳ ಪ್ರಾಮುಖ್ಯತೆಯ ಬಗ್ಗೆ ಕಾಲಾತೀತ ಭಾರತೀಯ ನೀತಿಗಳನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತಂ ಅನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ-
“दशपुत्रसमा कन्या दशपुत्रान् प्रवर्धयन्। यत् फलम् लभते मर्त्यस्तल्लभ्यं कन्ययैकया॥”
ಒಬ್ಬ ಮಗಳು ಹತ್ತು ಗಂಡು ಮಕ್ಕಳಿಗೆ ಸಮಾನ ಎಂದು ಸುಭಾಷಿತಂ ಹೇಳುತ್ತದೆ. ಒಬ್ಬ ವ್ಯಕ್ತಿಯು ಹತ್ತು ಗಂಡು ಮಕ್ಕಳಿಂದ ಪಡೆಯುವ ಪುಣ್ಯವನ್ನು ಒಬ್ಬ ಮಗಳಿಂದಲೂ ಪಡೆಯಬಹುದು ಎಂದು ಹೇಳುತ್ತದೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“कन्या को लक्ष्मी मानने वाले हमारे देश में 11 साल पहले आज ही के दिन बेटी बचाओ बेटी पढ़ाओ अभियान की शुरुआत हुई थी। यह बड़े गर्व की बात है कि आज भारत की बेटियां हर क्षेत्र में नित-नए रिकॉर्ड बना रही हैं।
दशपुत्रसमा कन्या दशपुत्रान् प्रवर्धयन्।
यत् फलम् लभते मर्त्यस्तल्लभ्यं कन्ययैकया॥”
*****
(रिलीज़ आईडी: 2217218)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Tamil
,
Malayalam