ಪ್ರಧಾನ ಮಂತ್ರಿಯವರ ಕಛೇರಿ
ದೋಡಾ ದುರಂತದಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
22 JAN 2026 8:14PM by PIB Bengaluru
ಜಮ್ಮು-ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಸೇನಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದೋಡಾದಲ್ಲಿನ ದುರ್ಘಟನೆಯಿಂದ ನನಗೆ ತೀವ್ರ ದುಃಖವಾಗಿದೆ. ಈ ಘಟನೆಯಲ್ಲಿ ನಮ್ಮ ಧೈರ್ಯಶಾಲಿ ಸೇನಾ ಸಿಬ್ಬಂದಿಯನ್ನು ನಾವು ಕಳೆದುಕೊಂಡಿದ್ದೇವೆ. ರಾಷ್ಟ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸದಾ ಸ್ಮರಿಸಲಾಗುವುದು ಎಂದು ಪ್ರಧಾನ ಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ಅವರು ಪ್ರಾರ್ಥಿಸಿದ್ದು, ತೊಂದರೆಯಲ್ಲಿರುವವರಿಗೆ ಎಲ್ಲಾ ಸಾಧ್ಯವಾದ ಸಹಾಯವನ್ನು ಒದಗಿಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಸಂದೇಶದಲ್ಲಿ ಹೀಗೆ ತಿಳಿಸಿದ್ದಾರೆ;
''ದೋಡಾದಲ್ಲಿ ದುರ್ಘಟನೆಯಿಂದ ತೀವ್ರ ದುಃಖವಾಗಿದೆ. ಈ ಘಟನೆಯಲ್ಲಿ ನಮ್ಮ ಧೈರ್ಯಶಾಲಿ ಸೇನಾ ಸಿಬ್ಬಂದಿಯನ್ನು ನಾವು ಕಳೆದುಕೊಂಡಿದ್ದೇವೆ. ರಾಷ್ಟ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸದಾ ಸ್ಮರಿಸಲಾಗುವುದು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಗಾಯಗೊಂಡವರಿಗೆ ಎಲ್ಲಾ ಸಾಧ್ಯವಾದ ನೆರವನ್ನು ಒದಗಿಸಲಾಗುತ್ತಿದೆ.”
*****
(रिलीज़ आईडी: 2218032)
आगंतुक पटल : 2