ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
प्रविष्टि तिथि:
24 JAN 2026 8:50AM by PIB Bengaluru
ಉತ್ತರ ಪ್ರದೇಶ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಎಲ್ಲಾ ಜನತೆಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೀಮಂತಿಕೆಗೆ ಉತ್ತರ ಪ್ರದೇಶ ನೀಡಿರುವ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.
ಡಬಲ್ ಎಂಜಿನ್ ಸರ್ಕಾರ ಹಾಗೂ ಅಭಿವೃದ್ಧಿಗೆ ಬದ್ಧರಾಗಿರುವ ಜನರ ಸಕ್ರಿಯ ಭಾಗವಹಿಸುವಿಕೆಯಿಂದ, ಕಳೆದ ಒಂಬತ್ತು ವರ್ಷಗಳಲ್ಲಿ ಉತ್ತರ ಪ್ರದೇಶವು ‘BIMARU’ ರಾಜ್ಯ ಅಂದರೆ ಐತಿಹಾಸಿಕವಾಗಿ ಕಡಿಮೆ ಅಭಿವೃದ್ಧಿ ಹೊಂದಿದ ರಾಜ್ಯ ಎಂಬ ಹಣೆಪಟ್ಟಿಯಿಂದ ಆದರ್ಶ ರಾಜ್ಯದತ್ತ ತನ್ನ ಪ್ರಯಾಣವನ್ನು ರೂಪಾಂತರಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.
ರಾಜ್ಯದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಮಂತ್ರಿಗಳು, ಉತ್ತರ ಪ್ರದೇಶದಲ್ಲಿರುವ ಅಪಾರ ಸಾಮರ್ಥ್ಯವು ರಾಷ್ಟ್ರದ ಪ್ರಗತಿಗೆ ಚುರುಕಾಗಿಯೂ ನಿರೀಕ್ಷೆಯಂತೆ ಭವಿಷ್ಯ ಮುಂದುವರಿಸಲು ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ;
“भारतीय संस्कृति और विरासत की समृद्धि में अमूल्य योगदान देने वाले उत्तर प्रदेश के अपने सभी परिवारजनों को राज्य के स्थापना दिवस की बहुत-बहुत बधाई। डबल इंजन सरकार और विकास को समर्पित यहां के लोगों की सहभागिता से हमारे इस राज्य ने बीते नौ वर्षों में बीमारू से बेमिसाल प्रदेश बनने का सफर तय किया है। मेरा दृढ़ विश्वास है कि देश की प्रगति को गतिशील बनाए रखने में उत्तर प्रदेश का सामर्थ्य बहुत काम आने वाला है।”
*****
(रिलीज़ आईडी: 2218469)
आगंतुक पटल : 2
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam