ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2026ರ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಪ್ರಧಾನಮಂತ್ರಿ 

प्रविष्टि तिथि: 25 JAN 2026 7:16PM by PIB Bengaluru

ರಾಷ್ಟ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ಪುರಸ್ಕೃತರ ಶ್ರೇಷ್ಠತೆ, ಸಮರ್ಪಣೆ ಮತ್ತು ಸೇವೆಯು ಸಮಾಜದ ರಚನೆ ವ್ಯವಸ್ಥೆಯನ್ನು ಶ್ರೀಮಂತಗೊಳಿಸುತ್ತದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಈ ಗೌರವವು ಪೀಳಿಗೆಗೆ ಸ್ಫೂರ್ತಿ ನೀಡುವ ಬದ್ಧತೆ ಮತ್ತು ಶ್ರೇಷ್ಠತೆಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

2026ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ "ಎಕ್ಸ್" ತಾಣದ ಸಂದೇಶಕ್ಕೆ ಸ್ಪಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ರೀತಿ ಪ್ರತಿಕ್ರಿಯಿಸಿದ್ದಾರೆ;

“ನಮ್ಮ ರಾಷ್ಟ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು. ವೈವಿಧ್ಯಮಯ ಕ್ಷೇತ್ರಗಳಲ್ಲಿ ಅವರ ಶ್ರೇಷ್ಠತೆ, ಸಮರ್ಪಣೆ ಮತ್ತು ಸೇವೆ ನಮ್ಮ ಸಮಾಜದ ರಚನೆಯನ್ನು ಶ್ರೀಮಂತಗೊಳಿಸುತ್ತದೆ. ಈ ಗೌರವವು ಪೀಳಿಗೆಗೆ ಸ್ಫೂರ್ತಿ ನೀಡುವ ಬದ್ಧತೆ ಮತ್ತು ಶ್ರೇಷ್ಠತೆಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ.”

 

*****


(रिलीज़ आईडी: 2218862) आगंतुक पटल : 6
इस विज्ञप्ति को इन भाषाओं में पढ़ें: Telugu , Malayalam , Odia , English , Urdu , Marathi , हिन्दी , Manipuri , Bengali , Bengali-TR , Punjabi , Gujarati