ಗೃಹ ವ್ಯವಹಾರಗಳ ಸಚಿವಾಲಯ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಅಜಿತ್ ಪವಾರ್ ಅವರು ಕಳೆದ ಮೂರೂವರೆ ದಶಕಗಳಲ್ಲಿ ಮಹಾರಾಷ್ಟ್ರದ ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ
ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ, ಪವಾರ್ ಕುಟುಂಬಕ್ಕೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ
ಈ ದುಃಖದ ಸಮಯದಲ್ಲಿ, ನಾವು ದುಃಖತಪ್ತ ಪವಾರ್ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತೇವೆ
प्रविष्टि तिथि:
28 JAN 2026 1:04PM by PIB Bengaluru
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದ ಮೂರೂವರೆ ದಶಕಗಳಲ್ಲಿ ಮಹಾರಾಷ್ಟ್ರದ ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಅಜಿತ್ ಪವಾರ್ ಅವರು ತಮ್ಮನ್ನು ತಾವು ಮುಡಿಪಾಗಿಟ್ಟ ರೀತಿಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂಬಂಧ 'ಎಕ್ಸ್' ನಲ್ಲಿ ಹಂಚಿಕೊಂಡಿರುವ ಶ್ರೀ ಅಮಿತ್ ಶಾ ಅವರು, "ಇಂದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ನಮ್ಮ ಹಿರಿಯ ಎನ್ ಡಿಎ ಸಹೋದ್ಯೋಗಿ ಅಜಿತ್ ಪವಾರ್ ಅವರು ಭೀಕರ ಅಪಘಾತದಲ್ಲಿ ನಿಧನರಾದ ಸುದ್ದಿ ನನ್ನ ಹೃದಯವನ್ನು ತೀವ್ರ ದುಃಖವನ್ನುಂಟು ಮಾಡಿದೆ. ಕಳೆದ ಮೂರೂವರೆ ದಶಕಗಳಲ್ಲಿ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ರೀತಿಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನಾವು ಭೇಟಿಯಾದಾಗಲೆಲ್ಲಾ, ಅವರು ಮಹಾರಾಷ್ಟ್ರದ ಜನರ ಕಲ್ಯಾಣಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸುದೀರ್ಘ ಚರ್ಚೆಗಳಲ್ಲಿ ತೊಡಗುತ್ತಿದ್ದರು. ಅವರ ನಿಧನವು ಎನ್ ಡಿಎ ಕುಟುಂಬಕ್ಕೆ ಮಾತ್ರವಲ್ಲದೆ ನನಗೂ ವೈಯಕ್ತಿಕ ನಷ್ಟವಾಗಿದೆ. ಪವಾರ್ ಕುಟುಂಬಕ್ಕೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ, ಇಡೀ ಎನ್ ಡಿಎ ದುಃಖತಪ್ತ ಪವಾರ್ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಗಲಿದ ಆತ್ಮಕ್ಕೆ ದೇವರು ತನ್ನ ದಿವ್ಯ ಪಾದಗಳ ಬಳಿ ಸ್ಥಾನ ನೀಡಲಿ. ಓಂ ಶಾಂತಿ, ಶಾಂತಿ, ಶಾಂತಿ."
*****
(रिलीज़ आईडी: 2219547)
आगंतुक पटल : 7