ಪ್ರಧಾನ ಮಂತ್ರಿಯವರ ಕಛೇರಿ
ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
प्रविष्टि तिथि:
30 JAN 2026 1:45PM by PIB Bengaluru
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. "ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ;
"ರಾಜ್‌ಘಾಟ್ ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದೆ. ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇವೆ. ಅವರ ತತ್ವಗಳಿಗೆ ಮತ್ತು ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ನಮ್ಮ ಬದ್ಧತೆಯನ್ನು ನಾವು ಈ ಸಂದರ್ಭದಲ್ಲಿ ಪುನರುಚ್ಚರಿಸುತ್ತೇವೆ."
*****
(रिलीज़ आईडी: 2220762)
आगंतुक पटल : 6
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam