ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
30 JAN 2026 6:43PM by PIB Bengaluru
ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಜೀವಹಾನಿ ಆಗಿದ್ದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಆಶಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ದಿಂದ ಮೃತರ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೆರವು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:
''ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರ ಮತ್ತು ಮನಕಲುಕುವಂತಹದ್ದು. ತಮ್ಮ ಕುಟುಂಬಸ್ಥರು ಮತ್ತು ಆಪ್ತರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಪಿಎಂಎನ್‌ಆರ್‌ಎಫ್‌ನಿಂದ ಮೃತರ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು. PM @narendramodi"
"পশ্চিমবঙ্গের আনন্দপুরে সাম্প্রতিক অগ্নিকাণ্ড অত্যন্ত মর্মান্তিক ও দু:খজনক। যাঁরা তাঁদের প্রিয়জনকে হারিয়েছেন তাঁদের প্রতি আমার সমবেদনা রইল। আহতদের দ্রুত আরোগ্য কামনা করি।
এই দুর্ঘটনায় নিহত প্রত্যেকের নিকটাত্মীয়কে PMNRF থেকে ২ লক্ষ টাকা করে এককালীন সহায়তা দেওয়া হবে। আহতদের ৫০,০০০ টাকা সহায়তা প্রদান করা হবে: প্রধানমন্ত্রী @narendramodi"
*****
(ಪ್ರಕಟಣೆ ಐ.ಡಿ.: 2221226)
ವಿಸಿಟರ್ ಕೌಂಟರ್ : 23
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam