ಪ್ರಧಾನ ಮಂತ್ರಿಯವರ ಕಛೇರಿ
ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಮಂತ್ರಿ; ಪಂಜಾಬ್ ಜನತೆಗೆ, ವಿಶೇಷವಾಗಿ ಲೂಧಿಯಾನ ಮತ್ತು ಸುತ್ತಮುತ್ತಲಿನ ಪ್ರದೇಶದವರಿಗೆ ಇದು ಸಂತೋಷದ ಕ್ಷಣ ಎಂದು ಬಣ್ಣನೆ
ಪ್ರಕಟಣಾ ದಿನಾಂಕ:
01 FEB 2026 7:18PM by PIB Bengaluru
ಹಲ್ವಾರಾ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಕಟ್ಟಡದ ಉದ್ಘಾಟನೆಯು ಪಂಜಾಬ್ ಜನತೆಗೆ, ವಿಶೇಷವಾಗಿ ಲೂಧಿಯಾನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಸಂತೋಷದ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಲೂಧಿಯಾನವು ಉತ್ತರ ಭಾರತದ ಪ್ರಮುಖ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರವಾಗಿದೆ. ಈ ನಗರಕ್ಕೆ ವಾಯು ಸಂಪರ್ಕವನ್ನು ಸುಧಾರಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ, ಇದು ಆಧುನಿಕ ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಪ್ರತಿಫಲಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಉದ್ಘಾಟನೆಯು ಪಂಜಾಬ್ ಜನತೆಗೆ, ವಿಶೇಷವಾಗಿ ಲೂಧಿಯಾನ ಮತ್ತು ಸುತ್ತಮುತ್ತಲಿನ ಪ್ರದೇಶದವರಿಗೆ ಸಂತೋಷದ ಕ್ಷಣವಾಗಿದೆ. ನಮಗೆಲ್ಲರಿಗೂ ತಿಳಿದಿರುವಂತೆ, ಲೂಧಿಯಾನವು ಉತ್ತರ ಭಾರತದ ಪ್ರಮುಖ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರವಾಗಿದೆ. ಈ ನಗರವು ತನ್ನ ಕ್ರಿಯಾಶೀಲ ಜನರಿಗೆ ಹೆಸರುವಾಸಿಯಾಗಿದೆ. ನಮ್ಮ ಸರ್ಕಾರವು ಈ ನಗರದ ವಾಯು ಸಂಪರ್ಕವನ್ನು ಸುಧಾರಿಸಲು ಅವಿರತವಾಗಿ ಶ್ರಮಿಸುತ್ತಿದೆ, ಇದು ಆಧುನಿಕ ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳಿಂದ ಸಾಬೀತಾಗುತ್ತಿದೆ.
"ਹਲਵਾਰਾ ਹਵਾਈ ਅੱਡੇ 'ਤੇ ਟਰਮੀਨਲ ਇਮਾਰਤ ਦਾ ਉਦਘਾਟਨ ਪੰਜਾਬ ਦੇ ਲੋਕਾਂ, ਖ਼ਾਸ ਕਰਕੇ ਲੁਧਿਆਣਾ ਅਤੇ ਨਜ਼ਦੀਕੀ ਇਲਾਕਿਆਂ ਲਈ ਬੇਹੱਦ ਖ਼ੁਸ਼ੀ ਦਾ ਮੌਕਾ ਹੈ। ਜਿਵੇਂ ਕਿ ਅਸੀਂ ਸਾਰੇ ਜਾਣਦੇ ਹਾਂ, ਲੁਧਿਆਣਾ ਉੱਤਰੀ ਭਾਰਤ ਦਾ ਅਹਿਮ ਸਨਅਤੀ ਅਤੇ ਵਪਾਰਕ ਕੇਂਦਰ ਹੈ। ਇਹ ਸ਼ਹਿਰ ਆਪਣੇ ਉੱਦਮੀ ਲੋਕਾਂ ਕਰਕੇ ਜਾਣਿਆ ਜਾਂਦਾ ਹੈ। ਸਾਡੀ ਸਰਕਾਰ ਇਸ ਸ਼ਹਿਰ ਦਾ ਹਵਾਈ ਸੰਪਰਕ ਬਿਹਤਰ ਬਣਾਉਣ ਲਈ ਅਣਥੱਕ ਮਿਹਨਤ ਕਰ ਰਹੀ ਹੈ, ਜੋ ਆਧੁਨਿਕ ਹਵਾਈ ਅੱਡੇ ਲਈ ਚੱਲ ਰਹੇ ਕੰਮਾਂ ਵਿੱਚ ਸਾਫ਼ ਝਲਕਦੀ ਹੈ।"
******
(ಪ್ರಕಟಣೆ ಐ.ಡಿ.: 2223730)
ವಿಸಿಟರ್ ಕೌಂಟರ್ : 14
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Telugu
,
Malayalam