ಪ್ರಧಾನ ಮಂತ್ರಿಯವರ ಕಛೇರಿ
ವಿದ್ಯಾರ್ಥಿಗಳ ಅಪರಿಮಿತ ಸಾಮರ್ಥ್ಯ ಮತ್ತು 'ಪರೀಕ್ಷಾ ಪೇ ಚರ್ಚಾ'ದ ಸ್ಫೂರ್ತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
09 FEB 2026 9:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ನಮ್ಮ ವಿದ್ಯಾರ್ಥಿಗಳು ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದಾರೆ ಮತ್ತು ಅವರ ಕನಸುಗಳನ್ನು ನನಸು ಮಾಡಿಕೊಳ್ಳುವ ಸಂಪೂರ್ಣ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವೈಯಕ್ತಿಕ ಬೆಳವಣಿಗೆ ಮತ್ತು ಯಶಸ್ಸಿಗೆ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಅರ್ಥಪೂರ್ಣವಾಗಿ ಹೇಗೆ ಬಳಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುವುದು ಪರೀಕ್ಷಾ ಪೇ ಚರ್ಚಾದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ -
“विद्या वितर्को विज्ञानं स्मृतिस्तत्परता क्रिया। यस्यैते षड्गुणास्तस्य नासाध्यमतिवर्तते॥”
ಈ ಸುಭಾಷಿತವು ಜ್ಞಾನ, ತರ್ಕ, ವಿಜ್ಞಾನ, ಸ್ಮರಣಶಕ್ತಿ, ಚುರುಕುತನ ಮತ್ತು ಚಟುವಟಿಕೆಯನ್ನು ಹೊಂದಿರುವ ವ್ಯಕ್ತಿಯು ಯಾವುದೇ ಸವಾಲನ್ನು ಗೆಲ್ಲಬಹುದು ಮತ್ತು ಅಂತಹ ವ್ಯಕ್ತಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ತಿಳಿಸುತ್ತದೆ.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“अद्भुत प्रतिभा के धनी हमारे विद्यार्थियों में अपने सपनों को सच करने की पूरी क्षमता है। 'परीक्षा पे चर्चा' का उद्देश्य भी यही है कि कैसे वे अपनी प्रतिभा और कौशल का सार्थक इस्तेमाल कर सकते हैं।
विद्या वितर्को विज्ञानं स्मृतिस्तत्परता क्रिया।
यस्यैते षड्गुणास्तस्य नासाध्यमतिवर्तते॥”
*****
(ಪ್ರಕಟಣೆ ಐ.ಡಿ.: 2225347)
ವಿಸಿಟರ್ ಕೌಂಟರ್ : 2