ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ ನಡೆಸಿದ ಮಾರಿಷಸ್ ಪ್ರಧಾನಮಂತ್ರಿ


2025ರ ಸೆಪ್ಟೆಂಬರ್ ನಲ್ಲಿ ವಾರಾಣಸಿಯಲ್ಲಿ ನಡೆದ ದ್ವಿಪಕ್ಷೀಯ ಸಭೆ ನಂತರ ಸಹಕಾರ ಸಂಬಂಧದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಉಭಯ ನಾಯಕರು

ಭಾರತ –ಮಾರಿಷಸ್ ಕಾರ್ಯತಂತ್ರ ಪಾಲುದಾರಿಕೆ ಮತ್ತಷ್ಟು ಮುನ್ನಡೆಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಉಭಯ ನಾಯಕರು.

ಮಾರಿಷನ್ ನ ಅಭಿವೃದ್ಧಿ ಆದ್ಯತೆಗಳಿಗೆ ಭಾರತದ ನಿರಂತರ ಬೆಂಬಲ ಪುನರುಚ್ಚರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಹಿಂದೂ ಮಹಾಸಾಗರ ಪ್ರಾಂತ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ನಿಟ್ಟಿನಲ್ಲಿ ನಿಕಟವಾಗಿ ಕಾರ್ಯ ನಿರ್ವಹಿಸಲು ಉಭಯ ನಾಯಕರ ಒಪ್ಪಿಗೆ

ಮುಂದಿನ ವಾರ ದೆಹಲಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಆಹ್ವಾನ ಮತ್ತು ಅವರ ಪಾಲ್ಗೊಳ್ಳುವಿಕೆ ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ

ಪ್ರಕಟಣಾ ದಿನಾಂಕ: 09 FEB 2026 9:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಉಭಯ ನಾಯಕರು 2025ರ ಸೆಪ್ಟೆಂಬರ್ ನಲ್ಲಿ ವಾರಾಣಸಿಯಲ್ಲಿ ನಡೆದ ಕೊನೆಯ ಸಭೆ ನಂತರ ದ್ವಿಪಕ್ಷೀಯ ಸಹಕಾರ ಸಂಬಂಧದಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು. ಈ ವೇಳೆ, ಅಭಿವೃದ್ಧಿ ಸಹಭಾಗಿತ್ವ, ಸಾಮರ್ಥ್ಯ ವೃದ್ಧಿ ಮತ್ತು ಜನಕೇಂದ್ರಿತ ವಿಚಾರಗಳ ವಿನಿಮಯಕ್ಕೆ ಒತ್ತು ನೀಡಲಾಯಿತು.

ಉಭಯ ನಾಯಕರು, ಭಾರತ ಮತ್ತು ಮಾರಿಷಸ್ ನಡುವಿನ ಜನರ ಒಳಿತಿಗಾಗಿ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ಮತ್ತಷ್ಟು ಉನ್ನತೀಕರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾಸಾಗರ ದೂರದೃಷ್ಟಿ, ಭಾರತದ ನೆರೆ-ಹೊರೆ ಮೊದಲು ನೀತಿಗಳಿಗೆ ಅನುಗುಣವಾಗಿ ಮಾರಿಷಸ್ ನ ಅಭಿವೃದ್ಧಿ ಆದ್ಯತೆಗಳಿಗೆ ಭಾರತ ನಿರಂತರ ಬೆಂಬಲ ನೀಡಲಿದೆ ಮತ್ತು ಜಾಗತಿಕ ದಕ್ಷಿಣದ ಧ್ವನಿ ಎತ್ತಲು ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು.

ಉಭಯ ನಾಯಕರು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸುವ ಉದ್ದೇಶದೊಂದಿಗೆ ಅತ್ಯಂತ ನಿಕಟವಾಗಿ ಕಾರ್ಯ ನಿರ್ವಹಿಸಲು ಒಪ್ಪಿಗೆ ಸೂಚಿಸಿದರು.

ದೆಹಲಿಯಲ್ಲಿ ಮುಂದಿನ ವಾರ ನಡೆಯಲಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಆಮಂತ್ರಣ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಮಗೂಲಂ ಅವರ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂಬ ಸಂದೇಶವನ್ನು ರವಾನಿಸಿದರು.

 

*****

 


(ಪ್ರಕಟಣೆ ಐ.ಡಿ.: 2225695) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Malayalam