ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

'ಬಸ್ತಾರ್ ಪಂಡಂ' ಹಬ್ಬದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 FEB 2026 10:42AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದಲ್ಲಿ ಫೆಬ್ರವರಿ 7ರಿಂದ 9 ರವರೆಗೆ 'ಬಸ್ತಾರ್ ಪಂಡಂ' ಉತ್ಸವದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಉತ್ಸವದ ಸಮಯದಲ್ಲಿ, ಬಸ್ತಾರ್ ನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಬುಡಕಟ್ಟು ಪರಂಪರೆಯನ್ನು ಭವ್ಯವಾಗಿ ಪ್ರದರ್ಶಿಸಲಾಯಿತು. ಇಂತಹ ಕಾರ್ಯಕ್ರಮಗಳು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಮತ್ತು ಸ್ಥಳೀಯ ಸಮುದಾಯಗಳನ್ನು ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

"ಈ ಹಿಂದೆ, ಬಸ್ತಾರ್ ಹೆಸರನ್ನು ಪ್ರಸ್ತಾಪಿಸಿದಾಗಲೆಲ್ಲಾ, ಮಾವೋವಾದ, ಹಿಂಸಾಚಾರ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿಯುವಿಕೆಯ ಚಿತ್ರಗಳು ನೆನಪಿಗೆ ಬರುತ್ತಿದ್ದವು. ಆದರೆ ಈಗ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಇಂದು, ಬಸ್ತಾರ್ ಕೇವಲ ಅಭಿವೃದ್ಧಿಗೆ ಮಾತ್ರವಲ್ಲದೆ ಸ್ಥಳೀಯ ಜನರ ಆತ್ಮವಿಶ್ವಾಸಕ್ಕೂ ಹೆಸರುವಾಸಿಯಾಗಿದೆ. ಈ ಪ್ರದೇಶದ ಮುಂಬರುವ ಸಮಯವು ಶಾಂತಿ, ಪ್ರಗತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಮನೋಭಾವದಿಂದ ತುಂಬಿರಲಿ ಎಂಬುದು ನನ್ನ ಏಕೈಕ ಆಸೆ", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಕೇಂದ್ರ ಸಚಿವರಾದ ಶ್ರೀ ಅಮಿತ್ ಶಾ ಅವರ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:

"7 से 9 फरवरी के बीच छत्तीसगढ़ में ‘बस्तर पंडुम’ का विशेष आयोजन किया गया। इस उत्सव के दौरान बस्तर की समृद्ध संस्कृति, परंपरा और जनजातीय विरासत का भव्य रूप दिखा। इस प्रयास से जुड़े अपने सभी परिवारजनों को मेरी हार्दिक बधाई। ऐसे आयोजन हमारी सांस्कृतिक विरासत को संरक्षित करने और स्थानीय समुदायों को सशक्त बनाने में अहम भूमिका निभाते हैं।

पहले जब बस्तर का नाम लिया जाता था तो माओवाद, हिंसा और विकास में पिछड़ेपन की छवि उभरती थी। लेकिन अब हालात बिल्कुल बदल चुके हैं। आज बस्तर विकास के साथ-साथ स्थानीय लोगों के बढ़ते आत्मविश्वास के लिए जाना जाता है। मेरी यही कामना है कि यहां का आने वाला समय शांति, प्रगति और सांस्कृतिक गौरव की भावना से परिपूर्ण हो।"

 

*****


(ಪ್ರಕಟಣೆ ಐ.ಡಿ.: 2225701) ವಿಸಿಟರ್ ಕೌಂಟರ್ : 18