ಪ್ರಧಾನ ಮಂತ್ರಿಯವರ ಕಛೇರಿ
ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 FEB 2026 3:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ. “ಈ ತೀವ್ರ ದುಃಖದ ಸಮಯದಲ್ಲಿ ಭಾರತ, ಕೆನಡಾದ ಜನತೆಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ’’ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಕೆನಡಾದಲ್ಲಿ ನಡೆದ ಭೀಕರ ಗುಂಡಿನ ದಾಳಿಯಿಂದ ನಿಜಕ್ಕೂ ತೀವ್ರ ಆಘಾತವಾಗಿದೆ.ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ತೀವ್ರ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಈ ತೀವ್ರ ದುಃಖದ ಸಮಯದಲ್ಲಿ ಭಾರತ ಕೆನಡಾದ ಜನತೆಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ’’.
@MarkJCarney
*****
(ಪ್ರಕಟಣೆ ಐ.ಡಿ.: 2226453)
ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam