ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಹೆರಾತ್ ಪೋಶ್ತೆ ಕುರಿತು ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 15 FEB 2026 8:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶ್ಮೀರಿ ಪಂಡಿತ ಸಮುದಾಯದ ಶ್ರೀಮಂತ ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬವಾದ ಹೆರಾತ್ ಪೋಶ್ತೆಗೆ ಶುಭಾಶಯ ಕೋರಿದರು. "ಈ ಪವಿತ್ರ ಸಂದರ್ಭದಲ್ಲಿ, ಪ್ರತಿಯೊಬ್ಬರ ಜೀವನದಲ್ಲಿ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ. ಇದು ಯಶಸ್ಸಿನ ಹೊಸ ಹಾದಿಗಳನ್ನು ತೆರೆಯಲಿ ಮತ್ತು ಪ್ರತಿ ಮನೆಯಲ್ಲಿ ಸಂತೋಷ ಮತ್ತು ಸಂತೃಪ್ತಿಯನ್ನು ತುಂಬಲಿ", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

"ಹೆರಾತ್ ಪೋಶ್ತೆ!

ಈ ಪವಿತ್ರ ಹಬ್ಬವು ನಮ್ಮ ಕಾಶ್ಮೀರಿ ಪಂಡಿತ್ ಸಮುದಾಯದ ಶ್ರೀಮಂತ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ.

ಈ ಪವಿತ್ರ ಸಂದರ್ಭದಲ್ಲಿ, ಪ್ರತಿಯೊಬ್ಬರ ಜೀವನದಲ್ಲಿ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ. ಇದು ಯಶಸ್ಸಿನ ಹೊಸ ಮಾರ್ಗಗಳನ್ನು ತೆರೆಯಲಿ ಮತ್ತು ಪ್ರತಿ ಮನೆಯನ್ನು ಸಂತೋಷ ಮತ್ತು ಸಂತೃಪ್ತಿಯಿಂದ ತುಂಬಲಿ." 

 

*****


(ಪ್ರಕಟಣೆ ಐ.ಡಿ.: 2228386) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Assamese , Punjabi , Gujarati , Telugu , Malayalam