ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಮಂತ್ರಿ, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಪ್ರಸ್ತಾಪ

ಪ್ರಕಟಣಾ ದಿನಾಂಕ: 17 FEB 2026 9:57AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಈ ಭೇಟಿ ಭಾರತ-ಫ್ರಾನ್ಸ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ವಿಶ್ವಾಸವಿದೆ ತಿಳಿಸಿದರು.

ಭೇಟಿಯ ಮಹತ್ವವನ್ನು ವಿವರಿಸಿದ ಪ್ರಧಾನಮಂತ್ರಿ ಅವರು, ಮುಂಬೈ ಮತ್ತು ನಂತರ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಗಳು ಎರಡೂ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ವೇಗವನ್ನು ನೀಡುತ್ತವೆ. ಈ ಸಹಯೋಗವು ಎರಡೂ ದೇಶಗಳಿಗೆ ಮಾತ್ರವಲ್ಲದೆ ವಿಶಾಲ ಜಾಗತಿಕ ಸಮುದಾಯಕ್ಕೂ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

ತಮ್ಮ ಎಕ್ಸ್‌ ಖಾತೆಯಲ್ಲಿ  ಈ ಕುರಿತು  ಪ್ರತ್ಯೇಕ ಪೋಸ್ಟ್‌ಗಳಲ್ಲಿ, ಶ್ರೀ ಮೋದಿ ಅವರು ಸಂದೇಶ ನೀಡಿದ್ದಾರೆ.

“ಭಾರತಕ್ಕೆ ಸ್ವಾಗತ!

ಭಾರತವು ನಿಮ್ಮ ಭೇಟಿಯನ್ನು ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಮುನ್ನಡೆಸಲು ಎದುರು ನೋಡುತ್ತಿದೆ. ನಮ್ಮ ಚರ್ಚೆಗಳು ವಲಯಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತವೆ ಮತ್ತು ಜಾಗತಿಕ ಪ್ರಗತಿಗೆ ಕೊಡುಗೆ ನೀಡುತ್ತವೆ ಎಂಬ ವಿಶ್ವಾಸವಿದೆ.

ಮುಂಬೈನಲ್ಲಿ ಮತ್ತು ನಂತರ ದೆಹಲಿಯಲ್ಲಿ ಭೇಟಿಯಾಗೋಣ ನನ್ನ ಆತ್ಮೀಯ ಸ್ನೇಹಿತ @EmmanuelMacron"

“Bienvenue en Inde !

L’Inde se félicite de votre visite et entend donner un nouvel élan à notre partenariat stratégique. Je suis convaincu que nos discussions renforceront davantage la coopération dans divers secteurs et contribueront au progrès mondial.

À très bientôt à Mumbai, puis à Delhi, mon cher ami @EmmanuelMacron.”

 

******

 


(ಪ್ರಕಟಣೆ ಐ.ಡಿ.: 2229121) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Malayalam