ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಮರೂಫ್ ರಝಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 26 FEB 2026 10:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮರೂಫ್ ರಝಾ ಅವರ ನಿಧನಕ್ಕೆ ಆಳವಾದ ಸಂತಾಪ ವ್ಯಕ್ತಪಡಿಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.

ಶ್ರೀ ಮರೂಫ್ ರಝಾ ಅವರು ಪತ್ರಿಕೋದ್ಯಮ ಲೋಕಕ್ಕೆ ಸಮೃದ್ಧ ಕೊಡುಗೆ ನೀಡಿದ್ದು, ರಕ್ಷಣಾ, ರಾಷ್ಟ್ರೀಯ ಭದ್ರತೆ ಮತ್ತು ಯುಕ್ತಿ-ತಂತ್ರ ಸಂಬಂಧಿತ ವಿಷಯಗಳ ಕುರಿತು ತಮ್ಮ ಸೂಕ್ಷ್ಮ ಹಾಗೂ ಆಳವಾದ ತಿಳುವಳಿಕೆಯ ಮೂಲಕ ಸಾರ್ವಜನಿಕ ಚರ್ಚೆಯನ್ನು ಸಮೃದ್ಧಗೊಳಿಸಿದರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಶ್ರೀ ಮರೂಫ್ ರಝಾ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದು, ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದಾರೆ:

“ಶ್ರೀ ಮರೂಫ್ ರಝಾ ಅವರು ಪತ್ರಿಕೋದ್ಯಮ ಲೋಕಕ್ಕೆ ಸಮೃದ್ಧ ಕೊಡುಗೆ ನೀಡಿದ್ದಾರೆ. ರಕ್ಷಣಾ, ರಾಷ್ಟ್ರೀಯ ಭದ್ರತೆ ಹಾಗೂ ತಂತ್ರಯುಕ್ತ ವಿಚಾರಗಳ ಕುರಿತು ತಮ್ಮ ಸೂಕ್ಷ್ಮ ತಿಳುವಳಿಕೆಯ ಮೂಲಕ ಸಾರ್ವಜನಿಕ ಚರ್ಚೆಯನ್ನು ಸಮೃದ್ಧಗೊಳಿಸಿದ್ದಾರೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು.”

 

*****


(ಪ್ರಕಟಣೆ ಐ.ಡಿ.: 2233436) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Assamese , Punjabi , Gujarati , Malayalam