ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕಾರ್ಖಾನೆ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 FEB 2026 6:45PM by PIB Bengaluru
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.
ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;
"ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."
"ఆంధ్రప్రదేశ్, కాకినాడ జిల్లాలోని కర్మాగారంలో ప్రమాదవశాత్తు జరిగిన పేలుడులో ప్రాణనష్టం సంభవించడం చాలా బాధాకరం. ఈ క్లిష్ట సమయంలో బాధిత ప్రజలు మరియు వారి కుటుంబాలకు నా ప్రగాఢ సానుభూతిని తెలియజేస్తూ, గాయపడినవారు త్వరగా కోలుకోవాలని ప్రార్థిస్తున్నాను.
ప్రమాదంలో మరణించిన వారి కుటుంబాలకు రూ. 2 లక్షలు, గాయపడిన వారికి రూ. 50,000 ఎక్స్ గ్రేషియా పిఎంఎన్ఆర్ఎఫ్ నుండి ఇవ్వబడుతుంది"
*****
(ಪ್ರಕಟಣೆ ಐ.ಡಿ.: 2233996)
ವಿಸಿಟರ್ ಕೌಂಟರ್ : 5