ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುದುಚೆರಿಯಲ್ಲಿ 2,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರೆವೇರಿಸಿದ ಸಂದರ್ಭದಲ್ಲಿ ಮಾಡಿದ ಭಾಷಣದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಕಟಣಾ ದಿನಾಂಕ: 01 MAR 2026 6:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 2,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಮಾಡಿದ ಭಾಷಣದ ಕೆಲವು ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಸರಣಿ ಎಕ್ಸ್ ಪೋಸ್ಟ್‌ಗಳಲ್ಲಿ, ಪ್ರಧಾನಮಂತ್ರಿ ಮೋದಿ ಅವರು ಹೀಗೆ ಹೇಳಿದ್ದಾರೆ:

"ಪುದುಚೆರಿಯ ಅದ್ಭುತ ಜನರೊಂದಿಗೆ ಒಬ್ಬನಾಗಿ ಹರ್ಷವಾಯಿತು. ಸುಗಮ ಜೀವನ ವರ್ಧಿಸುವ ಮತ್ತು ಪ್ರದೇಶದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಬಹು ಅಭಿವೃದ್ಧಿ ಕಾರ್ಯಗಳನ್ನು ಇಂದು ಪ್ರಾರಂಭಿಸಲಾಗುತ್ತಿದೆ."

“ನಮಸ್ಕಾರ ಪುದುಚೇರಿ!

ಹಲವಾರು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಪುದುಚೇರಿಯ ನನ್ನ ಸಹೋದರ ಸಹೋದರಿಯರೊಂದಿಗೆ ಇರಲು ಸಂತೋಷವಾಗಿದೆ. ಡಬಲ್ ಎಂಜಿನ್ ಎನ್‌ಡಿಎ ಸರ್ಕಾರವು ಜನರ ಕಲ್ಯಾಣಕ್ಕಾಗಿ ವ್ಯಾಪಕವಾಗಿ ಕಾರ್ಯನಿರ್ವಹಿಸಿದೆ.” 

"ಕಳೆದ ಐದು ವರ್ಷಗಳಲ್ಲಿ, ಪುದುಚೇರಿಯು ದಾಖಲೆಯ ಅಭಿವೃದ್ಧಿಯನ್ನು ಕಂಡಿದ್ದು, ಇದು ಉದ್ಯಮ, ಶಿಕ್ಷಣ, ಆಧ್ಯಾತ್ಮಿಕತೆ ಮತ್ತು ಪ್ರವಾಸೋದ್ಯಮ - ಬಿ ಇ ಎಸ್ ಟಿ ಪುದುಚೇರಿಯನ್ನು ನಿರ್ಮಿಸುವ ದೃಷ್ಟಿಕೋನಕ್ಕೆ ಅನುಗುಣವಾಗಿದೆ."

"ಪುದುಚೇರಿಯ ಯುವಕರನ್ನು ನಾವು ಹೇಗೆ ಸಬಲಗೊಳಿಸುತ್ತಿದ್ದೇವೆ ಎಂಬುದು ಇಲ್ಲಿದೆ..."

"ನಾವು ಪುದುಚೆರಿಯನ್ನು ವೈದ್ಯಕೀಯ ಪ್ರವಾಸೋದ್ಯಮ ಮತ್ತು ಸಮಗ್ರ ಆರೋಗ್ಯ ರಕ್ಷಣೆಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ."

"ದೆಹಲಿಯಲ್ಲಿ ಕೇವಲ ಒಂದು ಕುಟುಂಬಕ್ಕೆ ಮಾತ್ರ ಸೇವೆ ಸಲ್ಲಿಸಲು ಕಾಂಗ್ರೆಸ್ ಪುದುಚೆರಿಯನ್ನು ಎಟಿಎಂ ಮಾಡಿಕೊಂಡಿತ್ತು. ಅದಕ್ಕಾಗಿಯೇ ಪುದುಚೇರಿ ಎಂದಿಗೂ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ಹಾಕುವುದಿಲ್ಲ."

 

*****


(ಪ್ರಕಟಣೆ ಐ.ಡಿ.: 2234378) ವಿಸಿಟರ್ ಕೌಂಟರ್ : 42