ಪ್ರಧಾನ ಮಂತ್ರಿಯವರ ಕಛೇರಿ
ಬಹ್ರೇನ್ ಮಹಾರಾಜರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 MAR 2026 7:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹ್ರೇನ್ ದೇಶದ ಮಹಾರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.
ಸಂಭಾಷಣೆಯ ಸಮಯದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇತ್ತೀಚೆಗೆ ಬಹ್ರೇನ್ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಈ ಕಷ್ಟದ ಸಮಯದಲ್ಲಿ ಬಹ್ರೇನ್ ಜನರೊಂದಿಗೆ ಭಾರತದ ದೃಢವಾದ ಒಗ್ಗಟ್ಟನ್ನು ವ್ಯಕ್ತಪಡಿಸಿದರು.
ಬಹ್ರೇನ್ ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ದೃಢ ಬೆಂಬಲ ಮತ್ತು ಕಾಳಜಿಗಾಗಿ ಪ್ರಧಾನಮಂತ್ರಿಯವರು ಘನತೆವೆತ್ತ ಮಹಾರಾಜ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
“ಬಹ್ರೇನ್ ದೇಶದ ಘನತೆವೆತ್ತ ದೊರೆಯಾದ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಫಲಪ್ರದ ದೂರವಾಣಿ ಸಂಭಾಷಣೆ ನಡೆಸಿದೆ. ಭಾರತವು ಬಹ್ರೇನ್ ದೇಶದ ಮೇಲಿನ ದಾಳಿಯನ್ನು ಖಂಡಿಸುತ್ತದೆ ಮತ್ತು ಈ ಕಷ್ಟದ ಸಮಯದಲ್ಲಿ ಆ ದೇಶದ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಬಹ್ರೇನ್ ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ದೃಢ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳ ಬಯಸುತ್ತೇನೆ.”
*****
(ಪ್ರಕಟಣೆ ಐ.ಡಿ.: 2234737)
ವಿಸಿಟರ್ ಕೌಂಟರ್ : 5