ಪ್ರಧಾನ ಮಂತ್ರಿಯವರ ಕಛೇರಿ
ಜೋರ್ಡಾನ್ ಮಹಾರಾಜರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 MAR 2026 9:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ಮಹಾ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಈ ಪ್ರದೇಶದಲ್ಲಿನ ಉಲ್ಬಣಿಸಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರು ತೀವ್ರ ಕಳವಳ ವ್ಯಕ್ತಪಡಿಸಿದರು, ಹಾಗೂ ಜೋರ್ಡಾನ್ ಜನರ ಶಾಂತಿ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಅವರು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.
ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್ ದೇಶದನಲ್ಲಿರುವ ಭಾರತೀಯ ಸಮುದಾಯವನ್ನು ಕಾಳಜಿ ಪೂರ್ವಕವಾಗಿ ನೋಡಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರ ಅವರಿಗೆ ಧನ್ಯವಾದ ತಿಳಿಸಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
"ಜೋರ್ಡಾನ್ ಮಹಾರಾಜ ಅಬ್ದುಲ್ಲಾ II ಅವರೊಂದಿಗೆ ಮಾತನಾಡಿದೆ. ಪ್ರದೇಶದಲ್ಲಿನ ವಿಕಸನಗೊಳ್ಳುತ್ತಿರುವ ಉಲ್ಬಣ ಪರಿಸ್ಥಿತಿಯ ಬಗ್ಗೆ ನಮ್ಮ ಆಳವಾದ ಕಳವಳವನ್ನು ತಿಳಿಸಿದ್ದೇನೆ. ಶಾಂತಿ, ಭದ್ರತೆ ಮತ್ತು ಜೋರ್ಡಾನ್ ಜನರ ಯೋಗಕ್ಷೇಮಕ್ಕಾಗಿ ನಾವು ನಮ್ಮ ಬೆಂಬಲವನ್ನು ಪುನರುಚ್ಚರಿಸಿದೆ. ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್ ನಲ್ಲಿರುವ ಭಾರತೀಯ ಸಮುದಾಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ತಿಳಿಸಿದ್ದೇನೆ."
*****
(ಪ್ರಕಟಣೆ ಐ.ಡಿ.: 2234876)
ವಿಸಿಟರ್ ಕೌಂಟರ್ : 74
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam