ಪ್ರಧಾನ ಮಂತ್ರಿಯವರ ಕಛೇರಿ
ಅಟ್ಟುಕಲ್ ಪೊಂಗಲದ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
03 MAR 2026 6:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟ್ಟುಕಲ್ ಪೊಂಗಲದ ಪವಿತ್ರ ಸಂದರ್ಭದಲ್ಲಿ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ನಾರಿ ಶಕ್ತಿಗಾಗಿ ಹಬ್ಬದ ವಿಶೇಷ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಈ ಶುಭ ಸಂದರ್ಭದಲ್ಲಿ ಸಮಾಜದಲ್ಲಿ ಸಮೃದ್ಧಿ, ಉತ್ತಮ ಆರೋಗ್ಯ, ಸಾಮರಸ್ಯ ಮತ್ತು ಒಗ್ಗಟ್ಟಿಗಾಗಿ ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
ಅಟ್ಟುಕಲ್ ಪೊಂಗಲದ ಪವಿತ್ರ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಮ್ಮ ನಾರಿ ಶಕ್ತಿಗೆ ವಿಶೇಷ ಮಹತ್ವವನ್ನು ಹೊಂದಿದೆ. ಈ ಶುಭ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಮನೋಭಾವವು ಮತ್ತಷ್ಟು ಹೆಚ್ಚಾಗಲಿ.’’
*****
(ಪ್ರಕಟಣೆ ಐ.ಡಿ.: 2235206)
ವಿಸಿಟರ್ ಕೌಂಟರ್ : 50
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Punjabi
,
Gujarati
,
Tamil
,
Telugu
,
Malayalam