ಪ್ರಧಾನ ಮಂತ್ರಿಯವರ ಕಛೇರಿ
“ಜನೌಷಧಿ ದಿವಸ್ 2026” ಶುಭಾಶಯ ಕೋರಿದ ಪ್ರಧಾನಮಂತ್ರಿ
“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯ ಪರಿವರ್ತನಾತ್ಮಕ ಪರಿಣಾಮವನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ
प्रविष्टि तिथि:
07 MAR 2026 10:15AM by PIB Bengaluru
“ಜನೌಷಧಿ ದಿವಸ್ 2026” ಇದರ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯಿಂದ ಸಕಾರಾತ್ಮಕವಾಗಿ ಪ್ರಭಾವಿತರಾದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರತಿಯೊಬ್ಬ ನಾಗರಿಕನು ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ನಮ್ಮ ಬದ್ಧತೆಯನ್ನು ಈ ಉಪಕ್ರಮವು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಜನೌಷಧಿ ಕೇಂದ್ರಗಳ ಮೂಲಕ, ಅಸಂಖ್ಯಾತ ಕುಟುಂಬಗಳು ಆರೋಗ್ಯ ವೆಚ್ಚದಲ್ಲಿ ಉಳಿತಾಯ ಮಾಡುತ್ತಿವೆ ಮತ್ತು ಸರಿಯಾದ ಚಿಕಿತ್ಸೆಯನ್ನು ಪಡೆಯುತ್ತಿವೆ” ಎಂದು ಶ್ರೀ ಮೋದಿ ಹೇಳಿದರು.
“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯ ಪರಿವರ್ತನಾತ್ಮಕ ಪರಿಣಾಮದ ಒಂದು ನೋಟವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಬರೆದಿದ್ದಾರೆ;
"#JanAushadhiDiwas2026 ರಂದು, “ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ”ದಿಂದ ಸಕಾರಾತ್ಮಕವಾಗಿ ಪ್ರಭಾವಿತರಾದ ಎಲ್ಲರಿಗೂ ನನ್ನ ಶುಭಾಶಯಗಳು. ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕರಿಗೂ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ನೋಡಿಕೊಳ್ಳುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಜನೌಷಧಿ ಕೇಂದ್ರಗಳ ಮೂಲಕ, ಲೆಕ್ಕವಿಲ್ಲದಷ್ಟು ಕುಟುಂಬಗಳು ಆರೋಗ್ಯ ವೆಚ್ಚದಲ್ಲಿ ಉಳಿತಾಯ ಮಾಡುತ್ತಿವೆ ಮತ್ತು ಸರಿಯಾದ ಚಿಕಿತ್ಸೆಯನ್ನು ಪಡೆಯುತ್ತಿವೆ."
“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ” ದಿಂದ ಆಗಿರುವ ಪರಿವರ್ತನಾ ಪ್ರಭಾವಗಳ ಒಂದು ನೋಟ.
#JanAushadhiDiwas2026”
*****
(रिलीज़ आईडी: 2236261)
आगंतुक पटल : 82
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu