ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದರು


ಅಧ್ಯಕ್ಷರಾದ ಪೆಜೆಷ್ಕಿಯನ್ ಇರಾನ್ ಮತ್ತು ಪ್ರದೇಶದ ಪರಿಸ್ಥಿತಿಯ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ

ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭಾರತದ ಸ್ಥಿರ ನಿಲುವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ

ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮ ಮತ್ತು ಇಂಧನ ಮತ್ತು ಸರಕುಗಳ ಅಡೆತಡೆಯಿಲ್ಲದ ಸಾಗಣೆಗೆ ಸಂಬಂಧಿಸಿದಂತೆ ಭಾರತದ ಆದ್ಯತೆಯನ್ನು ಬಿಂಬಿಸಿದ ಪ್ರಧಾನಮಂತ್ರಿ

प्रविष्टि तिथि: 12 MAR 2026 11:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೂದ್ ಪೆಜೆಷ್ಕಿಯಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಅಧ್ಯಕ್ಷರಾದ ಪೆಜೆಷ್ಕಿಯನ್ ಅವರು ಇರಾನ್ ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಅವರಿಗೆ ವಿವರಿಸಿದರು ಮತ್ತು ಈ ಪ್ರದೇಶದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು.

ಈ ಪ್ರದೇಶದಲ್ಲಿ ಹೊರಹೊಮ್ಮುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂಬ ಭಾರತದ ಸ್ಥಿರ ನಿಲುವನ್ನು ಪುನರುಚ್ಚರಿಸಿದರು.

ಇರಾನ್ ಸೇರಿದಂತೆ ಈ ಪ್ರದೇಶದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದಂತೆ ಭಾರತದ ಆದ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ, ಇಂಧನ ಮತ್ತು ಸರಕುಗಳ ಅಡೆತಡೆಯಿಲ್ಲದ ಸಾಗಣೆಯ ಮಹತ್ವವನ್ನು ಪ್ರತಿಪಾದಿಸಿದರು.

ಬಳಿಕ ಉಭಯ ನಾಯಕರು ಸಂಪರ್ಕದಲ್ಲಿರಲು ಪರಸ್ಪ ಒಪ್ಪಿಕೊಂಡರು.

 

*****


(रिलीज़ आईडी: 2239453) आगंतुक पटल : 58
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Telugu , Malayalam