ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಪದ್ಮ ಪ್ರಶಸ್ತಿಗಳು-2027ಕ್ಕೆ ನಾಮನಿರ್ದೇಶನಗಳು ಪ್ರಾರಂಭ

ಪ್ರಕಟಣಾ ದಿನಾಂಕ: 15 MAR 2026 5:04PM by PIB Bengaluru

2027ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು-2027ಕ್ಕೆ ನಾಮನಿರ್ದೇಶನಗಳು / ಶಿಫಾರಸುಗಳು 2026ರ ಮಾರ್ಚ್ 15ರಿಂದ ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳಿಗೆ 2026ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ (https://awards.gov.in) ನಲ್ಲಿ ಮಾತ್ರ ಆನ್ ಲೈನ್ ನಲ್ಲಿ ಸ್ವೀಕರಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು 'ವಿಶಿಷ್ಟತೆಯ ಕೆಲಸವನ್ನು' ಗುರುತಿಸಲು ಪ್ರಯತ್ನಿಸುತ್ತದೆ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು / ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಾಗಿ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ" ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್ ಸಿ ಮತ್ತು ಎಸ್ ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

ನಾಮನಿರ್ದೇಶನಗಳು / ಶಿಫಾರಸುಗಳು ಮೇಲೆ ತಿಳಿಸಿದ ಪೋರ್ಟಲ್ ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು ಮತ್ತು ಆಯಾ ಕ್ಷೇತ್ರ / ವಿಭಾಗದಲ್ಲಿ ಶಿಫಾರಸು ಮಾಡಲಾದ ವ್ಯಕ್ತಿಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಯನ್ನು ಸ್ಪಷ್ಟವಾಗಿ ಹೊರತರಬೇಕು.

ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ ವೆಬ್ ಸೈಟ್ ನಲ್ಲಿ (https://mha.gov.in) ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್ (https://padmaawards.gov.in) ನಲ್ಲಿ 'ಪ್ರಶಸ್ತಿಗಳು ಮತ್ತು ಪದಕಗಳು' ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ವೆಬ್ ಸೈಟ್ ನಲ್ಲಿ  https://padmaawards.gov.in/AboutAwards.aspx ಲಿಂಕ್ ನೊಂದಿಗೆ ಲಭ್ಯವಿದೆ.

 

*****


(ಪ್ರಕಟಣೆ ಐ.ಡಿ.: 2240387) ವಿಸಿಟರ್ ಕೌಂಟರ್ : 49
ಪ್ರಕಟಣೆಯನ್ನು ಇದರಲ್ಲಿ ಓದಿ: Tamil , Bengali , English , Urdu , Marathi , हिन्दी , Assamese , Punjabi , Gujarati , Odia , Telugu , Malayalam