ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಅವರಿಂದ ಪಿ ಎಂ ಎನ್ ಆರ್ ಎಫ್ ನಡಿ ಪರಿಹಾರ ಘೋಷಣೆ
प्रविष्टि तिथि:
18 MAR 2026 1:52PM by PIB Bengaluru
ಪ್ರಧಾನಮಂತ್ರಿ ಅವರು ಇಂದೋರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಇಂದೋರ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಅವರು ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಪ್ರತಿ ಕುಟುಂಬಕ್ಕೂ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ ;
“ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ’’
*****
(रिलीज़ आईडी: 2241672)
आगंतुक पटल : 46
इस विज्ञप्ति को इन भाषाओं में पढ़ें:
Marathi
,
English
,
Urdu
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam