ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಓಮನ್ ಸುಲ್ತಾನರೊಂದಿಗೆ ಪ್ರಧಾನಮಂತ್ರಿ ಮಾತುಕತೆ


ಈದ್ ಶುಭಾಶಯ ಕೋರಿದ ಪ್ರಧಾನಮಂತ್ರಿ ಮತ್ತು ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಪ್ರಾದೇಶಿಕ ಸ್ಥಿರತೆಯ ಕುರಿತು ಚರ್ಚೆ

ಪ್ರಕಟಣಾ ದಿನಾಂಕ: 19 MAR 2026 4:39PM by PIB Bengaluru

ಪ್ರಧಾನಮಂತ್ರಿ ಅವರು ಓಮನ್ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಈ ಪ್ರದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಿದರು.  

ಪ್ರಧಾನಮಂತ್ರಿ, ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಮಾತನಾಡಿದರು ಮತ್ತು ಒಮಾನ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದರು. ಚರ್ಚೆಯ ವೇಳೆ, ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ನಂತರದ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುವ ಅಗತ್ಯತೆಯನ್ನು ಉಭಯ ನಾಯಕರು ಒಪ್ಪಿಕೊಂಡರು. ಭಾರತೀಯ ಪ್ರಜೆಗಳು ಸೇರಿದಂತೆ ಸಾವಿರಾರು ಜನರು ಸುರಕ್ಷಿತ ಸ್ವದೇಶಕ್ಕೆ ವಾಪಸ್ಸಾಗಲು ಅನುಕೂಲವಾಗುವಂತೆ ಓಮನ್‌ ಕೈಗೊಂಡ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ, ಒಮಾನ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯನ್ನು ಭಾರತ ಖಂಡಿಸುತ್ತದೆ ಎಂದು ಪುನರುಚ್ಚರಿಸಿದರು. ಹಾರ್ಮುಜ್ ಜಲಸಂಧಿಯ ಮೂಲಕ ಭಾರತ ಮತ್ತು ಒಮಾನ್ ಸುರಕ್ಷಿತ ಮತ್ತು ಮುಕ್ತ ಸಂಚಾರಕ್ಕಾಗಿ ನಿಲ್ಲುತ್ತವೆ ಎಂದು ಶ್ರೀ ನರೇಂದ್ರ ಮೋದಿ ಮತ್ತಷ್ಟು ಬಲವಾಗಿ ಪ್ರತಿಪಾದಿಸಿದರು.  

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ನನ್ನ ಸಹೋದರ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿ, ಒಮಾನ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದ್ದೇನೆ. 

ಬಿಕ್ಕಟ್ಟನ್ನು ಶಮನಗೊಳಿಸಲು ಮತ್ತು ನಂತರದ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುವ ಅಗತ್ಯತೆಯನ್ನು ನಾವು ಒಪ್ಪಿಕೊಂಡಿದ್ದೇವೆ.

ಒಮಾನ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯನ್ನು ಭಾರತ ಖಂಡಿಸಿದೆ ಮತ್ತು ಭಾರತೀಯ ಪ್ರಜೆಗಳು ಸೇರಿದಂತೆ ಸಾವಿರಾರು ಜನರ ಸುರಕ್ಷಿತ ವಾಪಸ್ಸಾತಿ ಸುಗಮಗೊಳಿಸಲು ಒಮಾನ್‌ನ ಪ್ರಯತ್ನಗಳನ್ನು ಶ್ಲಾಘಿಸಿದೆ.

ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರಕ್ಕಾಗಿ ಭಾರತ ಮತ್ತು ಒಮಾನ್ ಜತೆಯಾಗಿವೆ.’’

 

*****


(ಪ್ರಕಟಣೆ ಐ.ಡಿ.: 2242736) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Gujarati , Odia , Telugu