ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಮಲೇಷ್ಯಾ ಪ್ರಧಾನಮಂತ್ರಿ ಅವರೊಂದಿಗೆ ಮಾತುಕತೆ


ಮುಂಬರುವ ಹರಿರಾಯ ಐದಿಲ್ ಫಿತ್ರಿ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚೆ

ಪ್ರಕಟಣಾ ದಿನಾಂಕ: 19 MAR 2026 4:52PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು ಮತ್ತು ಪಶ್ಚಿಮ ಏಷ್ಯಾದಲ್ಲಿನ ಪ್ರಾದೇಶಿಕ ಆತಂಕಗಳ ಬಗ್ಗೆ ಸಮಾಲೋಚಿಸಿದರು.

ಪ್ರಧಾನಮಂತ್ರಿ ಅವರು ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮಾತನಾಡಿ, ಮುಂಬರುವ ಹರಿರಾಯ ಐದಿಲ್ ಫಿತ್ರಿ ಹಬ್ಬದ ಸಂದರ್ಭದಲ್ಲಿ ಅವರಿಗೆ ಮತ್ತು ಮಲೇಷ್ಯಾದ ಜನರಿಗೆ ಪ್ರೀತಿಯ ಶುಭಾಶಯಗಳನ್ನು ತಿಳಿಸಿದರು. ಚರ್ಚೆಯ ವೇಳೆ, ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಆತಂಕದ ಪರಿಸ್ಥಿತಿಯ ಬಗ್ಗೆ ಗಾಢವಾಗಿ ಚರ್ಚೆಸಿದರು ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು. ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಮಹತ್ವವನ್ನು ಶ್ರೀ ನರೇಂದ್ರ ಮೋದಿ ಮತ್ತು ಪ್ರಧಾನಿ ಇಬ್ರಾಹಿಂ ಬಲವಾಗಿ ಪ್ರತಿಪಾದಿಸಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ನನ್ನ ಮಿತ್ರ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಸಮಾಲೋಚಿಸಿದೆ ಮತ್ತು ಮುಂಬರುವ ಹರಿರಾಯ ಐದಿಲ್ ಫಿತ್ರಿ ಹಬ್ಬದ ಸಂದರ್ಭದಲ್ಲಿ ಅವರಿಗೆ ಮತ್ತು ಮಲೇಷ್ಯಾದ ಜನರಿಗೆ ಪ್ರೀತಿಯ ಶುಭಾಶಯಗಳನ್ನು ತಿಳಿಸಿದೆನು.

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಬಗ್ಗೆಯೂ ನಾವು ಆಳವಾಗಿ ಚರ್ಚಿಸಿದ್ದೇವೆ ಮತ್ತು ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ನಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ.’’

 

*****


(ಪ್ರಕಟಣೆ ಐ.ಡಿ.: 2242738) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Assamese , Bengali , Bengali-TR , Punjabi , Gujarati , Telugu