ಪ್ರಧಾನ ಮಂತ್ರಿಯವರ ಕಛೇರಿ
ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಮಾಲೋಚನೆ
ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಚರ್ಚೆ ಮತ್ತು ಉದ್ವಿಗ್ನತೆ ಶಮನಗೊಳಿಸುವ ಅಗತ್ಯತೆ ಪ್ರತಿಪಾದನೆ
ಪ್ರಕಟಣಾ ದಿನಾಂಕ:
19 MAR 2026 5:05PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆ ಶಮನಗೊಳಿಸುವ ಮತ್ತು ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳುವ ತುರ್ತು ಅಗತ್ಯದ ಕುರಿತು ಸಮಾಲೋಚನೆ ನಡೆಸಿದರು. ಆ ಪ್ರದೇಶದಲ್ಲಿ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ತಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಎದುರು ನೋಡುತ್ತಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳುವ ಕುರಿತು ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಮಾಲೋಚನೆ ನಡೆಸಿದನು.
ಆ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ.’’
*****
(ಪ್ರಕಟಣೆ ಐ.ಡಿ.: 2242744)
ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Gujarati
,
Odia
,
Telugu