ಪ್ರಧಾನ ಮಂತ್ರಿಯವರ ಕಛೇರಿ
ಜೋರ್ಡಾನ್ ನ ರಾಜನೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
ಪೂರ್ವಭಾವಿಯಾಗಿ ಈದ್ ಶುಭಾಶಯಗಳನ್ನು ತಿಳಿಸಿ, ಪಶ್ಚಿಮ ಏಷ್ಯಾದಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 MAR 2026 7:06PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ತಿಳಿಸಿ, ಆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.
ಪ್ರಧಾನಮಂತ್ರಿಯವರು ಎರಡನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿ, ಈದ್ ಹಬ್ಬದ ಶುಭಾಶಯಗಳನ್ನು ಪೂರ್ವಭಾವಿಯಾಗಿ ತಿಳಿಸಿದರು. ಈ ಚರ್ಚೆಯ ಸಮಯದಲ್ಲಿ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯನ್ನು ವಿವರಿಸಿದರು.
ಪಶ್ಚಿಮ ಏಷ್ಯಾದಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗಳು ಖಂಡನೀಯ ಮತ್ತು ಅವು ಅನಿಶ್ಚಿತ ಉಲ್ಬಣಕ್ಕೆ ಕಾರಣವಾಗಬಹುದು ಎಂದು ಪ್ರಧಾನಮಂತ್ರಿಯವರು ಹೇಳಿದರು. ಸರಕು ಮತ್ತು ಇಂಧನದ ನಿರಂತರ ಸಾಗಣೆಗೆ ಭಾರತ ಮತ್ತು ಜೋರ್ಡಾನ್ ಬೆಂಬಲ ನೀಡುತ್ತವೆ ಎಂದು ಶ್ರೀ ಮೋದಿಯವರು ದೃಢಪಡಿಸಿದರು. ಈ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತ ವಾಪಸಾತಿಗೆ ಅನುಕೂಲ ಮಾಡಿಕೊಡುವಲ್ಲಿ ಜೋರ್ಡಾನ್ ಪ್ರಯತ್ನಗಳಿಗೆ ಪ್ರಧಾನಿಯವರು ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಯವ್ರು X ನಲ್ಲಿ:
"ನನ್ನ ಸಹೋದರ, ಜೋರ್ಡಾನ್ ರಾಜ ಅಬ್ದುಲ್ಲಾ II ಅವರಿಗೆ ದೂರವಾಣಿ ಮೂಲಕ ಈದ್ ಶುಭಾಶಯಗಳನ್ನು ತಿಳಿಸಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ನಾವು ಕಳವಳ ವ್ಯಕ್ತಪಡಿಸಿ, ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯವನ್ನು ಉಲ್ಲೇಖಿಸಿದ್ದೇವೆ. ಪಶ್ಚಿಮ ಏಷ್ಯಾದಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗಳು ಖಂಡನೀಯ ಮತ್ತು ಅನಿಶ್ಚಿತ ಉಲ್ಬಣಕ್ಕೆ ಕಾರಣವಾಗಬಹುದು. ಸರಕು ಮತ್ತು ಇಂಧನದ ನಿರಂತರ ಸಾಗಣೆಗೆ ಭಾರತ ಮತ್ತು ಜೋರ್ಡಾನ್ ಬೆಂಬಲವಾಗಿ ನಿಂತಿವೆ. ಈ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತ ವಾಪಸಾತಿಗೆ ಅನುಕೂಲ ಮಾಡಿಕೊಡುವಲ್ಲಿ ಜೋರ್ಡಾನ್ ಪ್ರಯತ್ನಗಳನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇವೆ."
*****
(ಪ್ರಕಟಣೆ ಐ.ಡಿ.: 2242814)
ವಿಸಿಟರ್ ಕೌಂಟರ್ : 6