ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಗೆ  ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 20 MAR 2026 2:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಬಹುಮುಖಿ ಭಾರತ-ಥೈಲ್ಯಾಂಡ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹೊಸ ಥಾಯ್ ನಾಯಕತ್ವದೊಂದಿಗೆ ನಿಕಟವಾಗಿ ಕೆಲಸ ಮಾಡುವ ಆಸಕ್ತಿಯನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಸಂಬಂಧಗಳು ಹಂಚಿಕೆಯ ನಾಗರಿಕತೆಯ ಪರಂಪರೆ, ನಿಕಟ ಸಾಂಸ್ಕೃತಿಕ ಸಂಪರ್ಕಗಳು ಮತ್ತು ಜನರ ನಡುವಿನ ಸಕ್ರೀಯ ಸಂಬಂಧಗಳಲ್ಲಿ ಆಳವಾಗಿ ಬೇರೂರಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಭಾರತ ಮತ್ತು ಥೈಲ್ಯಾಂಡ್ ತಮ್ಮ ತಮ್ಮ ಜನರಿಗೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ತಮ್ಮ ಹಂಚಿಕೆಯ ಆಕಾಂಕ್ಷೆಗಳಲ್ಲಿ ಒಗ್ಗಟ್ಟಿನಿಂದಿವೆ ಎಂದು ಅವರು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

”ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಅನುತಿನ್ ಚರ್ಣವಿರಕುಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ. ಒಗ್ಗೂಡಿ ನಾವು ಬಹುಮುಖಿ ಭಾರತ-ಥೈಲ್ಯಾಂಡ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ. ನಮ್ಮ ಸಂಬಂಧಗಳು ಹಂಚಿಕೆಯ ನಾಗರಿಕ ಪರಂಪರೆ, ನಿಕಟ ಸಾಂಸ್ಕೃತಿಕ ಸಂಪರ್ಕ ಮತ್ತು ಜನರ ನಡುವಿನ ಸಕ್ರಿಯ ಸಂಬಂಧಗಳಲ್ಲಿ ಬೇರೂರಿದೆ. ಭಾರತ ಮತ್ತು ಥೈಲ್ಯಾಂಡ್  ನಮ್ಮ ಜನರಿಗೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ನಮ್ಮ ಹಂಚಿಕೆಯ ಆಕಾಂಕ್ಷೆಗಳಲ್ಲಿ ಒಗ್ಗಟ್ಟಿನಿಂದರಲಿದ್ದೇವೆ.’’

 

*****


(ಪ್ರಕಟಣೆ ಐ.ಡಿ.: 2242953) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Telugu