ಪ್ರಧಾನ ಮಂತ್ರಿಯವರ ಕಛೇರಿ
ಇರಾನ್ ನ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ; ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಒತ್ತು
ಪ್ರಕಟಣಾ ದಿನಾಂಕ:
21 MAR 2026 4:26PM by PIB Bengaluru
ಪ್ರಾದೇಶಿಕ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತಾಗಿ ಚರ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಇಸ್ಲಾಮಿಕ್ ಗಣರಾಜ್ಯವಾದ ಇರಾನ್ ನ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದರು.
ಈದ್ ಮತ್ತು ನೌರುಜ್ ಹಬ್ಬದ ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಅಧ್ಯಕ್ಷರಾದ ಡಾ. ಮಸೂದ್ ಪೆಜೆಶ್ಕಿಯಾನ್ ಅವರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಚರ್ಚೆಯ ಸಂದರ್ಭದಲ್ಲಿ, ಈ ಹಬ್ಬದ ಋತುವು ಪಶ್ಚಿಮ ಏಷ್ಯಾ ಪ್ರದೇಶಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರಲಿ ಎಂಬ ಆಶಯವನ್ನು ಉಭಯ ನಾಯಕರು ಆಶಿಸಿದರು. ಈ ಪ್ರದೇಶದಲ್ಲಿನ ಮೂಲಭೂತ ಸೌಕರ್ಯಗಳ ಮೇಲಿನ ಇತ್ತೀಚಿನ ದಾಳಿಗಳನ್ನು ಶ್ರೀ ಮೋದಿಯವರು ಖಂಡಿಸಿದರು, ಇಂತಹ ಕ್ರಮಗಳು ಪ್ರಾದೇಶಿಕ ಸ್ಥಿರತೆಗೆ ಮಾರಕವಾಗಿದ್ದು, ಪ್ರಮುಖ ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುತ್ತವೆ ಎಂದು ತಿಳಿಸಿದರು. ನೌಕಾಯಾನ ಸ್ವಾತಂತ್ರ್ಯವನ್ನು ಕಾಪಾಡುವುದು ಮತ್ತು ಅಂತರರಾಷ್ಟ್ರೀಯ ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ನಿರ್ಣಾಯಕ ಮಹತ್ವವನ್ನು ಪ್ರಧಾನಮಂತ್ರಿಯವರು ಸ್ಪಷ್ಟಪಡಿಸಿದರು. ಇದಲ್ಲದೆ, ದೇಶದಲ್ಲಿ ವಾಸಿಸುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ಇರಾನ್‌ನ ನಿರಂತರ ಬೆಂಬಲಕ್ಕಾಗಿ ಶ್ರೀ ಮೋದಿಯವರು ತಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
Xನಲ್ಲಿ ಪ್ರಧಾನಮಂತ್ರಿಯವರು:
"ಅಧ್ಯಕ್ಷರಾದ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದ್ದೇನೆ. ಈ ಹಬ್ಬವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಾವು ಆಶಿಸುತ್ತೇವೆ.
ಪ್ರಾದೇಶಿಕ ಸ್ಥಿರತೆಗೆ ಮಾರಕವಾಗುವ ಹಾಗೂ ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುವ ಈ ಪ್ರದೇಶದಲ್ಲಿನ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಲಾಯಿತು.
ಸಂಚಾರ ಸ್ವಾತಂತ್ರ್ಯವನ್ನು ಕಾಪಾಡುವ ಮತ್ತು ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಪುನರುಚ್ಚರಿಸಿದ್ದೇವೆ.
ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್‌ನ ನಿರಂತರ ಬೆಂಬಲವನ್ನು ಶ್ಲಾಘಿಸಿದ್ದೇವೆ."
*****
(ಪ್ರಕಟಣೆ ಐ.ಡಿ.: 2243522)
ವಿಸಿಟರ್ ಕೌಂಟರ್ : 17
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Telugu
,
Malayalam