ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರವನ್ನು ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
23 MAR 2026 5:40PM by PIB Bengaluru
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇಂದು ಕಟ್ಟಡ ಕುಸಿತದಿಂದ ಉಂಟಾದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇವೆ ಎಂದು ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು ಮತ್ತು ಪ್ರತಿ ಮೃತರ ಸನಿಹದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಘಟನೆಯಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಹೇಳಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ:
"ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಟ್ಟಡ ಕುಸಿದು ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ"
*****
(ಪ್ರಕಟಣೆ ಐ.ಡಿ.: 2244332)
ವಿಸಿಟರ್ ಕೌಂಟರ್ : 13
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam