ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಅಮೆರಿಕ ಅಧ್ಯಕ್ಷರಿಂದ ಪ್ರಧಾನಮಂತ್ರಿಗಳಿಗೆ ದೂರವಾಣಿ ಕರೆ

ಪ್ರಕಟಣಾ ದಿನಾಂಕ: 24 MAR 2026 8:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಕುರಿತು ಇಬ್ಬರೂ ನಾಯಕರು ಉಪಯುಕ್ತ ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಉದ್ವಿಗ್ನತೆ ಶಮನಕ್ಕೆ ಮತ್ತು ಆದಷ್ಟು ಬೇಗ ಶಾಂತಿ ಪುನಃಸ್ಥಾಪನೆಗೆ ಭಾರತ ಬೆಂಬಲ ನೀಡಲಿದೆ ಎಂದು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಹಾರ್ಮುಜ್ ಜಲಸಂಧಿಯು ಮುಕ್ತ, ಸುರಕ್ಷಿತ ಮತ್ತು ಸುಲಭವಾಗಿ ತಲುಪಬಹುದಾಗುವಂತೆ ಮಾಡುವುದನ್ನು ಖಾತರಿಪಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳುತ್ತಾ, ಪ್ರಧಾನಮಂತ್ರಿಗಳು, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಉತ್ತಮ ಆರ್ಥಿಕತೆಗೆ ಇದು ಅತ್ಯಗತ್ಯ ಎಂದು ಪ್ರತಿಪಾದಿಸಿದರು. 

ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಉತ್ತೇಜಿಸುವ ಗುರಿಯನ್ನು ಹೊಂದಿರುವ ನಿರಂತರ ಪ್ರಯತ್ನಗಳ ಕುರಿತು ಪರಸ್ಪರ ಸಂಪರ್ಕದಲ್ಲಿರಲು ಇಬ್ಬರೂ ನಾಯಕರು ಸಮ್ಮತಿಸಿದರು.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

"ಅಧ್ಯಕ್ಷ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದ್ದು, ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಉಪಯುಕ್ತ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಸಾಧ್ಯವಾದಷ್ಟು ಬೇಗ ಉದ್ವಿಗ್ನತೆ ತಗ್ಗಿಸಲು ಮತ್ತು ಶಾಂತಿ ಪುನಃಸ್ಥಾಪನೆಗೆ ಭಾರತ ಬೆಂಬಲ ನೀಡುತ್ತದೆ. ಹಾರ್ಮುಜ್ ಜಲಸಂಧಿಯು ಮುಕ್ತ, ಸುರಕ್ಷಿತ ಮತ್ತು ಪ್ರವೇಶ ಸಾಧ್ಯವಾಗಿರಿಸುವುದನ್ನು ಖಚಿತಪಡಿಸಿಕೊಳ್ಳುವುದು ಇಡೀ ವಿಶ್ವಕ್ಕೆ ಅತ್ಯಗತ್ಯ. ಶಾಂತಿ ಮತ್ತು ಸ್ಥಿರತೆಯೆಡೆಗಿನ ಪ್ರಯತ್ನಗಳ ಕುರಿತು ಪರಸ್ಪರ ಸಂಪರ್ಕದಲ್ಲಿರಲು ನಾವು ಒಪ್ಪಿಕೊಂಡೆವು."

@realDonaldTrump

@POTUS”

 

*****


(ಪ್ರಕಟಣೆ ಐ.ಡಿ.: 2244857) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: Khasi , English , Urdu , हिन्दी , Marathi , Assamese , Manipuri , Punjabi , Gujarati , Telugu