ಗೃಹ ವ್ಯವಹಾರಗಳ ಸಚಿವಾಲಯ
ಇಂಧನದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಇಡೀ ವಿಶ್ವ ಇಂಧನ ಕೊರತೆಯಿಂದ ಬಳಲುತ್ತಿದ್ದು, ಜಾಗತಿಕವಾಗಿ ಬೆಲೆಗಳು ಹೆಚ್ಚಾಗುತ್ತಿವೆ; ಇಂತಹ ಹೊತ್ತಿನಲ್ಲಿ ಇಂಧನದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರದಿಂದ ನಾಗರಿಕರಿಗೆ ಅಗತ್ಯ ಪರಿಹಾರ ಲಭ್ಯ
ಅನೇಕ ರಾಷ್ಟ್ರಗಳು ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳನ್ನು ಹೆಚ್ಚಿಸಿದ್ದರೂ, ಅಬಕಾರಿ ಸುಂಕ ಕಡಿತಗೊಳಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ಅದರ ಜನ-ಕೇಂದ್ರಿತ ಆಡಳಿತ ಮತ್ತು ಸೂಕ್ಷ್ಮತೆಯ ಆಧಾರದ ನಿರ್ಧಾರ ಕೈಗೊಳ್ಳುವಿಕೆಯ ಪ್ರತಿಪಾದನೆ
प्रविष्टि तिथि:
27 MAR 2026 1:30PM by PIB Bengaluru
ಇಂಧನ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡಿದ್ದಕ್ಕಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ “ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಇಡೀ ಪ್ರಪಂಚ ಇಂಧನ ಕೊರತೆಯಿಂದ ನಲುಗುತ್ತಿದ್ದು, ಜಾಗತಿಕವಾಗಿ ಬೆಲೆಗಳು ಏರಿಕೆಯಾಗುತ್ತಿವೆ. ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ನಾಗರಿಕರಿಗೆ ಅಗತ್ಯವಾದ ಪರಿಹಾರವನ್ನು ದೊರಕಿಸಿಕೊಡುತ್ತದೆ. ಅನೇಕ ರಾಷ್ಟ್ರಗಳು ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳನ್ನು ಹೆಚ್ಚಿಸಿವೆ, ಆದರೆ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ಅದರ ಜನ-ಕೇಂದ್ರಿತ ಆಡಳಿತ ಮತ್ತು ಸೂಕ್ಷ್ಮತೆಯ ಆಧಾರದ ನಿರ್ಧಾರ ಕೈಗೊಳ್ಳುವುದನ್ನು ಬಲವಾಗಿ ಪ್ರತಿಪಾದಿಸುತ್ತದೆ. ಈ ನಿರ್ಧಾರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು’’ ಎಂದು ಹೇಳಿದ್ದಾರೆ.
*****
(रिलीज़ आईडी: 2246058)
आगंतुक पटल : 59
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Bengali-TR
,
Manipuri
,
Punjabi
,
Gujarati
,
Telugu