ಪ್ರಧಾನ ಮಂತ್ರಿಯವರ ಕಛೇರಿ
ಸೌದಿ ಅರೇಬಿಯಾದ ಯುವರಾಜಕುಮಾರ ಹಾಗೂ ಪ್ರಧಾನಮಂತ್ರಿ ಗೌರವಾನ್ವಿತ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ
प्रविष्टि तिथि:
28 MAR 2026 9:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಯುವರಾಜರು ಹಾಗೂ ಪ್ರಧಾನಮಂತ್ರಿ ಗೌರವಾನ್ವಿತ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಚರ್ಚಿಸಿದರು.
ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಪುನರುಚ್ಛರಿಸಿದರು. ಸಾಗರ ಮಾರ್ಗಗಳ ಸ್ವಾತಂತ್ರ್ಯವನ್ನು ಕಾಪಾಡುವುದು ಹಾಗೂ ಸಾಗಣೆ ಮಾರ್ಗಗಳನ್ನು ಸುರಕ್ಷಿತವಾಗಿ ತೆರೆದಿಡುವ ಅಗತ್ಯ ಕುರಿತು ಉಭಯ ನಾಯಕರು ಒಪ್ಪಿಕೊಂಡರು.
ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿರುವ ಭಾರತೀಯರ ಕಲ್ಯಾಣಕ್ಕಾಗಿ ನೀಡುತ್ತಿರುವ ನಿರಂತರ ಬೆಂಬಲಕ್ಕಾಗಿ ಪ್ರಧಾನ ಮಂತ್ರಿ ಮೋದಿ ಅವರು ಯುವರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಇದನ್ನು ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ:
“ಸೌದಿ ಅರೇಬಿಯಾದ ಯುವರಾಜಕುಮಾರ ಮತ್ತು ಪ್ರಧಾನಮಂತ್ರಿ ಗೌರವಾನ್ವಿತ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿ, ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಚರ್ಚೆ ನಡೆಸಿದೆನು.
ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ಪುನರುಚ್ಚರಿಸಿದೆನು.
ಸಾಗರ ಮಾರ್ಗಗಳ ಸ್ವಾತಂತ್ರ್ಯವನ್ನು ಖಚಿತಪಡಿಸಿ, ಸಾಗಣೆ ಮಾರ್ಗಗಳನ್ನು ತೆರೆಯಾಗಿ ಮತ್ತು ಸುರಕ್ಷಿತವಾಗಿಡುವ ಅಗತ್ಯತೆಯ ಬಗ್ಗೆ ನಾವು ಒಪ್ಪಿಕೊಂಡಿದ್ದೇವೆ.
ಸೌದಿ ಅರೇಬಿಯಾದಲ್ಲಿರುವ ಭಾರತೀಯರ ಕಲ್ಯಾಣಕ್ಕಾಗಿ ನೀಡುತ್ತಿರುವ ಬೆಂಬಲಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆನು.”
*****
(रिलीज़ आईडी: 2246687)
आगंतुक पटल : 42
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam