ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ಕಲಾ ದಿನದ ಅಂಗವಾಗಿ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 APR 2026 10:31AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರಕ್ಕೆ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.  ”ಒಡಿಶಾದ ಜನರು ತಮ್ಮ ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾಗಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರವನ್ನು ಏರಲಿ’’ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳು. ಒಡಿಶಾ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರವಾಗಿ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ. ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾದ ಒಡಿಶಾದ ಜನರು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರಕ್ಕೆ ಏರಲಿ.’’

 

*****


(ಪ್ರಕಟಣೆ ಐ.ಡಿ.: 2247581) ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Telugu