ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಿಕ್ಷಣದ ಪರಿವರ್ತನಾತ್ಮಕ ಶಕ್ತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 03 APR 2026 9:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶಿಕ್ಷಣವು ಕೇವಲ ಜೀವನೋಪಾಯದ ಸಾಧನವಲ್ಲ, ಜೀವನವನ್ನು ಉತ್ತಮಗೊಳಿಸುವ ಪ್ರಬಲ ಮಾಧ್ಯಮವಾಗಿದೆ ಎಂದು ಹೇಳಿದರು. ಇದು ದೇಶದ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರಕ್ಕೆ ಕೀರ್ತಿಯನ್ನು ತರುತ್ತಿರುವ ಅಮೂಲ್ಯ ಆಸ್ತಿಯಾಗಿದೆ ಎಂದು ಅವರು ಉಲ್ಲೇಖಿಸಿದರು.

ಪ್ರಧಾನಮಂತ್ರಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

“श्रियः प्रदुग्धे विपदो रुणद्धि
यशांसि सूते मलिनं प्रमार्ष्टि।

संस्कारशौचेन परं पुनीते
शुद्धा हि बुद्धिः किल कामधेनुः॥”

ವಿದ್ಯಾವಂತ, ಪರಿಶುದ್ಧ ಮತ್ತು ಶುದ್ಧ ಬುದ್ಧಿಶಕ್ತಿಯು ವ್ಯಕ್ತಿಯ ಜೀವನದಲ್ಲಿ ಕಷ್ಟಗಳನ್ನು ನಿವಾರಿಸುತ್ತದೆ ಮತ್ತು ಯಶಸ್ಸು, ಗೌರವ,  ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂಬುದನ್ನು ಸುಭಾಷಿತವು ತಿಳಿಸುತ್ತದೆ. ವಾಸ್ತವವಾಗಿ, ಪ್ರಬುದ್ಧ ಮನಸ್ಸನ್ನು ಕಾಮಧೇನುವಿನಂತೆ ಪರಿಗಣಿಸಲಾಗುತ್ತದೆ, ಇದು ಎಲ್ಲಾ ರೀತಿಯ ಆಶೋತ್ತರಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“शिक्षा केवल आजीविका का साधन नहीं, बल्कि जीवन को श्रेष्ठ बनाने का सशक्त माध्यम भी है। यह वो अनमोल पूंजी है, जिसके जरिए आज हमारी युवाशक्ति हर क्षेत्र में नए-नए कीर्तिमान बनाकर देश का नाम रोशन कर रही है।

श्रियः प्रदुग्धे विपदो रुणद्धि
यशांसि सूते मलिनं प्रमार्ष्टि। 

संस्कारशौचेन परं पुनीते 
शुद्धा हि बुद्धिः किल कामधेनुः॥”

 

*****


(ಪ್ರಕಟಣೆ ಐ.ಡಿ.: 2248760) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Gujarati , Telugu