ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಬಾಬು ಜಗಜೀವನ್ ರಾಮ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ತಮ್ಮ ಇಡೀ ಜೀವನವನ್ನು ರಾಷ್ಟ್ರದ ಸೇವೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟಿದ್ದ ಬಾಬು ಜಗಜೀವನ್ ರಾಮ್

ಸಮಾಜದ ದುರ್ಬಲ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಅವರ ಹೋರಾಟವು ನಮಗೆ ಸ್ಫೂರ್ತಿ

ಪ್ರಕಟಣಾ ದಿನಾಂಕ: 05 APR 2026 1:03PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಬಾಬು ಜಗಜೀವನ್ ರಾಮ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಶ್ರೀ ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ”ಸಾಮಾಜಿಕ ನ್ಯಾಯದ ಪ್ರವರ್ತಕ ಬಾಬು ಜಗಜೀವನ್ ರಾಮ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು. ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರ ಮತ್ತು ಸಾಮಾಜಿಕ ನ್ಯಾಯದ ಸೇವೆಗಾಗಿ ಮುಡಿಪಾಗಿಟ್ಟರು. ಅವರು ಸ್ವಾತಂತ್ರ್ಯ ಹೋರಾಟಕ್ಕೆ ಅಪ್ರತಿಮ ಕೊಡುಗೆ ನೀಡಿದ್ದರು ಮತ್ತು ಮತಾಂತರದ ವಿರುದ್ಧ ನಿಂತಾಗ ವಿಭಜಕ ಶಕ್ತಿಗಳನ್ನು ದೃಢವಾಗಿ ವಿರೋಧಿಸಿದರು. ಸಮಾಜದ ದುರ್ಬಲ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರ ಹೋರಾಟವು ನಮಗೆ ಸದಾ ಸ್ಫೂರ್ತಿ ನೀಡುತ್ತದೆ.’’ 

 

*****


(ಪ್ರಕಟಣೆ ಐ.ಡಿ.: 2249133) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Assamese , Punjabi , Gujarati