ಕೃಷಿ ಸಚಿವಾಲಯ
azadi ka amrit mahotsav

ಹಲವು ರಾಜ್ಯಗಳಲ್ಲಿ ಭಾರೀ ಮಳೆ, ಆಲಿಕಲ್ಲು ಮಳೆಯ ಬಗ್ಗೆ ಗಮನ ಹರಿಸಿದ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್


ಆಲಿಕಲ್ಲು ಮಳೆ, ಭಾರೀ ಮಳೆಯಿಂದಾಗಿ ಬೆಳೆ ಹಾನಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಶ್ರೀ ಚೌಹಾಣ್

ರೈತ ಸಹೋದರ ಸಹೋದರಿಯರು ಚಿಂತಿಸಬೇಕಾಗಿಲ್ಲ; ಈ ಬಿಕ್ಕಟ್ಟಿನ ಸಮಯದಲ್ಲಿ ಮೋದಿ ಸರ್ಕಾರ ನಮ್ಮ ರೈತರೊಂದಿಗಿದೆ: ಶ್ರೀ ಚೌಹಾಣ್

ಪ್ರಕಟಣಾ ದಿನಾಂಕ: 05 APR 2026 12:15PM by PIB Bengaluru

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಹಲವು ರಾಜ್ಯಗಳಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಆಲಿಕಲ್ಲು ಮಳೆಯ ಬಗ್ಗೆ ಗಮನ ಹರಿಸಿದ್ದಾರೆ.

ಆಲಿಕಲ್ಲು ಮಳೆ ಮತ್ತು ಭಾರೀ ಮಳೆಯಿಂದ ಉಂಟಾದ ಬೆಳೆ ಹಾನಿಯನ್ನು ಪರಿಶೀಲಿಸಲು ಶ್ರೀ ಚೌಹಾಣ್ ಅವರು ಕೃಷಿ ಸಚಿವಾಲಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಂಬಂಧಪಟ್ಟ ರಾಜ್ಯಗಳಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಸಂಗ್ರಹಿಸಲು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈತ ಸಹೋದರ ಸಹೋದರಿಯರು ಚಿಂತಿಸುವ ಅಗತ್ಯವಿಲ್ಲ ಎಂದು ಶ್ರೀ ಚೌಹಾಣ್ ಭರವಸೆ ನೀಡಿದ್ದಾರೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಮೋದಿ ಸರ್ಕಾರ ರೈತರೊಂದಿಗೆ ಇರುಗತ್ತದೆ ಎಂದು ಶ್ರೀ ಚೌಹಾಣ್ ಭರವಸೆ ನೀಡಿದ್ದಾರೆ. ಆಲಿಕಲ್ಲು ಮಳೆ ಮತ್ತು ಭಾರೀ ಮಳೆಯಿಂದಾಗಿ ಬೆಳೆ ಹಾನಿಯ ವಿಷಯವನ್ನು ಶ್ರೀ ಚೌಹಾಣ್ ಇಂದು ಸಂಬಂಧಪಟ್ಟ ರಾಜ್ಯಗಳ ಕೃಷಿ ಸಚಿವರೊಂದಿಗೆ ಚರ್ಚಿಸಲಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2249136) ವಿಸಿಟರ್ ಕೌಂಟರ್ : 18
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Bengali-TR , Punjabi , Gujarati , Telugu