ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಸಾಗರ ದಿನದಂದು ಭಾರತದ ಕಡಲ ಪರಂಪರೆಯನ್ನು ಸ್ಮರಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
05 APR 2026 2:29PM by PIB Bengaluru
ರಾಷ್ಟ್ರೀಯ ಸಾಗರ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಶ್ರೀಮಂತ ಕಡಲ ಪರಂಪರೆಯನ್ನು ಸ್ಮರಿಸಿದ್ದಾರೆ ಮತ್ತು ಈ ವಲಯಕ್ಕೆ ಸಂಬಂಧಿಸಿದ ಎಲ್ಲರ ಅಮೂಲ್ಯ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಸಾಗರ ವಲಯದಲ್ಲಿನ ವ್ಯಕ್ತಿಗಳ ಬದ್ಧತೆ ದೇಶದ ಆರ್ಥಿಕತೆ, ವ್ಯಾಪಾರ ಮತ್ತು ಸಂಪರ್ಕವನ್ನು ಬಲಪಡಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ರಾಷ್ಟ್ರದ ಸಮೃದ್ಧ ಭವಿಷ್ಯವನ್ನು ಖಾತ್ರಿಪಡಿಸಿಕೊಳ್ಳಲು ಸಾಗರ ವಲಯ ಅಗಾಧ ಸಾಮರ್ಥ್ಯವನ್ನು ಬಳಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ಪುನರುಚ್ಚಸಿದರು.
ಪ್ರಧಾನಮಂತ್ರಿಯವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;
“ರಾಷ್ಟ್ರೀಯ ಸಾಗರ ದಿನದಂದು, ನಾವು ಭಾರತದ ಸಾಗರ ಪರಂಪರೆಯನ್ನು ಮತ್ತು ಈ ವಲಯಕ್ಕೆ ಸಂಬಂಧಿಸಿದ ಎಲ್ಲರ ಅಮೂಲ್ಯ ಕೊಡುಗೆಯನ್ನು ನೆನಪಿಸಿಕೊಳ್ಳುತ್ತೇವೆ. ಅವರ ಬದ್ಧತೆ ನಮ್ಮ ಆರ್ಥಿಕತೆ, ವ್ಯಾಪಾರ ಮತ್ತು ಸಂಪರ್ಕವನ್ನು ಬಲಪಡಿಸುತ್ತದೆ.
ನಮ್ಮ ಸಾಗರ ವಲಯದ ಅಗಾಧ ಸಾಮರ್ಥ್ಯವನ್ನು ಸಮೃದ್ಧ ಭವಿಷ್ಯಕ್ಕಾಗಿ ಬಳಸಿಕೊಳ್ಳುವುದನ್ನು ನಾವು ಮುಂದುವರಿಸುತ್ತೇವೆ.’’
*****
(ಪ್ರಕಟಣೆ ಐ.ಡಿ.: 2249137)
ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Telugu