ಸಹಕಾರ ಸಚಿವಾಲಯ
azadi ka amrit mahotsav

2025-26ರಲ್ಲಿ 1 ಲಕ್ಷ ಕೋಟಿ ರೂ.ಗಳ ವಾರ್ಷಿಕ ವಹಿವಾಟು ದಾಟಿದ್ದಕ್ಕಾಗಿ ಸಾರಸ್ವತ್ ಸಹಕಾರಿ ಬ್ಯಾಂಕ್ ಮತ್ತು ಅಮುಲ್ ಅನ್ನು ಶ್ಲಾಘಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ಈ ಸಾಧನೆಯು ಸಹಕಾರಿ ಬ್ಯಾಂಕಿಂಗ್ ಮತ್ತು ಹೈನುಗಾರಿಕೆ ಕ್ಷೇತ್ರಗಳಿಗೆ ಐತಿಹಾಸಿಕವಾಗಿದೆ ಮತ್ತು ಆತ್ಮನಿರ್ಭರ ಭಾರತವನ್ನು ನಿರ್ಮಿಸುವ ಪ್ರಯಾಣಕ್ಕೆ ಹೊಸ ವೇಗವನ್ನು ನೀಡುತ್ತದೆ

ಪ್ರಕಟಣಾ ದಿನಾಂಕ: 07 APR 2026 12:35PM by PIB Bengaluru

2025-26ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ.ಗಳ ವಾರ್ಷಿಕ ವಹಿವಾಟಿನ ಮೈಲಿಗಲ್ಲನ್ನು ದಾಟಿದ ಸಾರಸ್ವತ್ ಸಹಕಾರಿ ಬ್ಯಾಂಕ್ ಮತ್ತು ಅಮುಲ್ ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀ ಅಮಿತ್ ಶಾ, "ಸಾರಸ್ವತ್ ಸಹಕಾರಿ ಬ್ಯಾಂಕ್ ಮತ್ತು ಅಮುಲ್ 2025-26ರಲ್ಲಿ 1 ಲಕ್ಷ ಕೋಟಿ ರೂ.ಗಳ ವಾರ್ಷಿಕ ವಹಿವಾಟು ಗಡಿಯನ್ನು ದಾಟಿರುವುದು ಸಹಕಾರಿ ಸಂಸ್ಥೆಗಳ ಶಕ್ತಿ ಮತ್ತು ಅವುಗಳ ಅಪಾರ ಸಾಮರ್ಥ್ಯಕ್ಕೆ ಎದ್ದುಕಾಣುವ ಉದಾಹರಣೆಯಾಗಿದೆ. ಈ ಸಾಧನೆಯು ಸಹಕಾರಿ ಬ್ಯಾಂಕಿಂಗ್ ಮತ್ತು ಹೈನುಗಾರಿಕೆ ಕ್ಷೇತ್ರಗಳಿಗೆ ಐತಿಹಾಸಿಕ ಮಾತ್ರವಲ್ಲ, ಇದು ಆತ್ಮನಿರ್ಭರ ಭಾರತವನ್ನು ನಿರ್ಮಿಸುವ ಪ್ರಯಾಣಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ. ಈ ಹೆಮ್ಮೆಯ ಸಾಧನೆಗಾಗಿ ಅಮುಲ್ ಮತ್ತು ಸಾರಸ್ವತ್ ಸಹಕಾರಿ ಬ್ಯಾಂಕ್ ಗೆ ಸಂಬಂಧಿಸಿದ ಎಲ್ಲಾ ಕರ್ಮಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು." 

 

*****


(ಪ್ರಕಟಣೆ ಐ.ಡಿ.: 2249584) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: Marathi , English , Urdu , हिन्दी , Bengali , Punjabi , Gujarati , Telugu