ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
azadi ka amrit mahotsav

ವಿಶ್ವ ಆರೋಗ್ಯ ದಿನದಂದು ಮುನ್ನೆಚ್ಚರಿಕೆ ಮತ್ತು ಉತ್ತೇಜಕ ಆರೋಗ್ಯ ರಕ್ಷಣೆಯ ಮೇಲೆ ಸರ್ಕಾರದ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಪ್ರಮುಖವಾಗಿ ಪ್ರತಿಪಾದಿಸಿದ  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ


ವಿಶ್ವ ಆರೋಗ್ಯ ದಿನದಂದು ಶುಭಾಶಯ ಕೋರಿದ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ.ಪಿ. ನಡ್ಡಾ

ಪ್ರಕಟಣಾ ದಿನಾಂಕ: 07 APR 2026 1:58PM by PIB Bengaluru

ವಿಶ್ವ ಆರೋಗ್ಯ ದಿನದಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಶುಭಾಶಯ ಕೋರಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ತಮ್ಮ ಸಾಮಾಜಿಕ ಜಾಲತಾಣ  X  ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ “ #WorldHealthDay !

ಈ ದಿನವು ನಮ್ಮ ಆರೋಗ್ಯದ ಬಗ್ಗೆ ಉತ್ತಮ ಕಾಳಜಿ ತೋರಲು ಮತ್ತು ಸಮತೋಲಿತ ಜೀವನಶೈಲಿ ಅನುಸರಿಸುವುದನ್ನು  ನಮಗೆ ನೆನಪು ಮಾಡಿಕೊಡುತ್ತದೆ. ಭಾರತದ ಆರೋಗ್ಯ ರಕ್ಷಣೆಯ ವಿಧಾನವು ಪ್ರಾಚೀನ ಕಾಲದ ವಿವೇಕವನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸುತ್ತದೆ, ಇದು ಮನೆಯಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಜೀವನ ಸುಧಾರಿಸಲು ಸಹಾಯ ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ @narendramodi ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಆಯುಷ್ಮಾನ್ ಭಾರತ್ ಮತ್ತು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನದಂತಹ ಪರಿವರ್ತನಾ ಉಪಕ್ರಮಗಳು ಆರೋಗ್ಯ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಿವೆ. ಗುಣಮಟ್ಟದ ಚಿಕಿತ್ಸೆಯನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಲಭ್ಯವಾಗುವಂತೆ ಮಾಡಿದೆ. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಬಲವಾಗಿಡುವ ಸಮರ್ಪಣಾಭಾವದಿಂದ ಇರುವ ಎಲ್ಲಾ ವೈದ್ಯರು, ದಾದಿಯರು ಮತ್ತು ಮುಂಚೂಣಿಯ ಕಾರ್ಮಿಕರಿಗೆ ನಾವು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇವೆ. ಆರೋಗ್ಯಕರ ಮತ್ತು ಬಲಿಷ್ಠ ರಾಷ್ಟ್ರವನ್ನು ನಿರ್ಮಿಸಲು ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸೋಣ.’’

 

*****


(ಪ್ರಕಟಣೆ ಐ.ಡಿ.: 2249661) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Punjabi , Gujarati , Telugu