ಪ್ರಧಾನ ಮಂತ್ರಿಯವರ ಕಛೇರಿ
ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಇಂದಿನ ಅಗತ್ಯ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದ್ದಾರೆ
ಮಹಿಳಾ ಮೀಸಲಾತಿ ಮಸೂದೆಯ ಮೂಲಕ ಭಾರತದ ಪ್ರಜಾಪ್ರಭುತ್ವವನ್ನು ಇನ್ನಷ್ಟು ವೈವಿಧ್ಯಮಯ ಮತ್ತು ಎಲ್ಲರೂ ಒಳಗೊಳ್ಳುವಂತೆ ಮಾಡಲು ಓಪ್-ಎಡ್‌ನಲ್ಲಿ ಪ್ರಧಾನಮಂತ್ರಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ
ಪ್ರಕಟಣಾ ದಿನಾಂಕ:
09 APR 2026 8:51AM by PIB Bengaluru
ಭಾರತೀಯ ಪ್ರಜಾಪ್ರಭುತ್ವವನ್ನು ಇನ್ನಷ್ಟು ಚೈತನ್ಯಶೀಲ ಮತ್ತು ಭಾಗವಹಿಸುವಿಕೆಯಿಂದ ಕೂಡಿಸಲು ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರತಿಪಾದಿಸಿದರು.
ಈ ಮೀಸಲಾತಿಯನ್ನು ಜಾರಿಗೆ ತರಲು ವಿಳಂಬ ಮಾಡಿದರೆ ಅತ್ಯಂತ ದೌರ್ಭಾಗ್ಯ ಸಂಗತಿ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ವಿಷಯದ ಕುರಿತು ತಮ್ಮ ಆಲೋಚನೆಗಳು ಮತ್ತು ದೃಷ್ಟಿಕೋನವನ್ನು ಇತ್ತೀಚೆಗೆ ಪ್ರಕಟವಾದ ಓಪ್-ಎಡ್ ಲೇಖನದ ಮೂಲಕ ವಿವರಿಸಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
“ವಿಧಾನಮಂಡಲಗಳಲ್ಲಿ ಮಹಿಳಾ ಮೀಸಲಾತಿ ತರುವುದು ಈ ಕಾಲದ ಅವಶ್ಯಕತೆಯಾಗಿದೆ! ಇದು ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಚೈತನ್ಯಮಯ ಹಾಗೂ ಎಲ್ಲರೂ ಪಾಲ್ಗೊಳ್ಳುವಂತೆ ಮಾಡುತ್ತದೆ. ಈ ಮೀಸಲಾತಿಯನ್ನು ಜಾರಿಗೆ ತರಲು ಯಾವುದೇ ವಿಳಂಬವೂ ಅತ್ಯಂತ ದೌರ್ಭಾಗ್ಯಕರವಾಗಲಿದೆ. ಈ ವಿಷಯದ ಕುರಿತು ನನ್ನ ಅಭಿಪ್ರಾಯಗಳನ್ನು ಓಪ್-ಎಡ್‌ನಲ್ಲಿ ಹಂಚಿಕೊಂಡಿದ್ದೇನೆ.”
“महिलाओं के लिए विधायी संस्थाओं में आरक्षण समय की मांग है! इससे हमारा लोकतंत्र और अधिक जीवंत एवं सहभागी बनेगा। इस आरक्षण को लागू करने में किसी भी तरह की देरी अत्यंत दुर्भाग्यपूर्ण होगी। इसी को लेकर मैंने अपने विचार इस आलेख में साझा किए हैं।”
*****
(ಪ್ರಕಟಣೆ ಐ.ಡಿ.: 2250386)
ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam