ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ಕಟಿಹಾರ್‌ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್‌ ಆರ್‌ ಎಫ್‌ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 APR 2026 10:56PM by PIB Bengaluru

ಬಿಹಾರದ ಕಟಿಹಾರ್‌ ನಲ್ಲಿ ನಡೆದ ಭೀಕರ ಅಪಘಾತ ಅತ್ಯಂತ ನೋವಿನಿಂದ ಕೂಡಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಬಿಹಾರದ ಕಟಿಹಾರ್‌ನಲ್ಲಿ ಸಂಭವಿಸಿದ ಅಪಘಾತ ಅತ್ಯಂತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ.

ಮೃತರ ವಾರಸುದಾರರಿಗೆ ಪಿ ಎಂ ಎನ್‌ ಆರ್‌ ಎಫ್‌ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು."

 

*****


(ಪ್ರಕಟಣೆ ಐ.ಡಿ.: 2251459) ವಿಸಿಟರ್ ಕೌಂಟರ್ : 11