ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
13 APR 2026 11:32AM by PIB Bengaluru
ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ತಮ್ಮ ಕುಟುಂಬಸ್ಥರು, ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಮಂತ್ರಿಗಳು ತೀವ್ರ ಸಂತಾಪ ಸೂಚಿಸಿ ಗಾಯಗೊಂಡ ಎಲ್ಲರೂ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಈ ದುರ್ಘಟನೆ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ."
*****
(ಪ್ರಕಟಣೆ ಐ.ಡಿ.: 2251485)
ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Telugu
,
Malayalam