ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 14 APR 2026 8:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಉಲ್ಲೇಖಿಸಿದರು.

ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದರು. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು.

ಪ್ರಧಾನಮಂತ್ರಿಗಳ ಕಚೇರಿ ತನ್ನ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ  ಹೀಗೆ ತಿಳಿಸಿದೆ;

“ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಅಪಘಾತವು ದುರಂತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಮೃತರ ಎಲ್ಲಾ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: PM @narendramodi’’

 

*****


(रिलीज़ आईडी: 2252140) आगंतुक पटल : 45
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Telugu , Malayalam