ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಬಿಹಾರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವಿಜಯ್ ಕುಮಾರ್ ಚೌಧರಿ ಮತ್ತು ಶ್ರೀ ಬಿಜೇಂದ್ರ ಪ್ರಸಾದ್ ಯಾದವ್ ಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 15 APR 2026 2:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಅವರಿಗೆ  ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀ ಸಾಮ್ರಾಟ್ ಚೌಧರಿ ಅವರ ಶಕ್ತಿ, ಸಾರ್ವಜನಿಕ ಸೇವೆಗೆ ಬದ್ಧತೆ ಮತ್ತು ತಳಮಟ್ಟದ ಅನುಭವವು ರಾಜ್ಯಕ್ಕೆ ಅತ್ಯಂತ ಉಪಕಾರಿಯಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚೌಧರಿ ಅವರ ಸಮರ್ಥ ನಾಯಕತ್ವದಲ್ಲಿ ಬಿಹಾರವು ಜನರ ಆಕಾಂಕ್ಷೆಗಳನ್ನು ಈಡೇರಿಸುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ತಲುಪುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೆ, ಪ್ರಧಾನಮಂತ್ರಿ  ಅವರು ಬಿಹಾರದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಜಯ್ ಕುಮಾರ್ ಚೌಧರಿ ಮತ್ತು ಶ್ರೀ ಬಿಜೇಂದ್ರ ಪ್ರಸಾದ್ ಯಾದವ್ ಗೆ ಅಭಿನಂದನೆ ಸಲ್ಲಿಸಿದರು.

ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ತಳಮಟ್ಟದ ಅನುಭವ ಮತ್ತು ಬದ್ಧತೆಯು ಬಿಹಾರದ ಅಭಿವೃದ್ಧಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡುತ್ತದೆ ಮತ್ತು ರಾಜ್ಯವು ಉತ್ತಮ ಆಡಳಿತ, ಪಾರದರ್ಶಕತೆ ಮತ್ತು ಸಾರ್ವಜನಿಕ ಕಲ್ಯಾಣದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಮಂತ್ರಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ  ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“बिहार के मुख्यमंत्री के रूप में शपथ लेने पर सम्राट चौधरी जी को बहुत-बहुत बधाई और ढेरों शुभकामनाएं! उनकी ऊर्जा, जनसेवा के प्रति समर्पण और जमीनी अनुभव राज्य के लिए बेहद उपयोगी साबित होने वाला है। मुझे पूर्ण विश्वास है कि उनके कुशल नेतृत्व में जनता-जनार्दन की आकांक्षाओं को पूरा करते हुए बिहार चौतरफा विकास की नई ऊंचाइयों को छुएगा।

@samrat4bjp”

“बिहार के उप मुख्यमंत्री के रूप में शपथ लेने वाले विजय कुमार चौधरी जी और बिजेंद्र प्रसाद यादव जी को हार्दिक बधाई और शुभकामनाएं! मुझे पूरा भरोसा है कि इनका जमीनी अनुभव और जनहित को लेकर प्रतिबद्धता बिहार के विकास को नई दिशा और गति देगी। इसके साथ ही राज्य सुशासन, पारदर्शिता और जनकल्याण के नित-नए मानक स्थापित करेगा।

@VijayKChy”

 

*****

                                                          


(ಪ್ರಕಟಣೆ ಐ.ಡಿ.: 2252251) ವಿಸಿಟರ್ ಕೌಂಟರ್ : 15