ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 APR 2026 9:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಎಲ್ಲಾ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು.

ಪ್ರಧಾನಮಂತ್ರಿಗಳ ಕಚೇರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ;

“ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ಸುದ್ದಿ ಕೇಳಿ ತೀವ್ರ ನೋವಾಗುತ್ತಿದೆ.ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಪ್ರತಿಯೊಬ್ಬ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: PM @narendramodi’’

 

*****


(ಪ್ರಕಟಣೆ ಐ.ಡಿ.: 2252509) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Telugu , Malayalam