ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ ಮಾಡಿದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಾಗರ ಭದ್ರತೆಯ ಕುರಿತು ಚರ್ಚೆ
प्रविष्टि तिथि:
16 APR 2026 10:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರು ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದರು.
ಸಂವಾದದ ಸಮಯದಲ್ಲಿ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸದ್ಯದ ಸಂಘರ್ಷ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆಯನ್ನು ಪುನಃಸ್ಥಾಪಿಸುವ ಮತ್ತು ನೌಕಾಯಾನ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿಕೊಳ್ಳುವ ತುರ್ತು ಅಗತ್ಯದ ಬಗ್ಗೆ ಇಬ್ಬರೂ ನಾಯಕರು ಒಪ್ಪಿಕೊಂಡರು.
ಆ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಿಕಟ ಸಹಕಾರವನ್ನು ಮುಂದುವರಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;
“ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ ಬಂದಿದೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ನಾವು ಚರ್ಚಿಸಿದ್ದೇವೆ ಮತ್ತು ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ನೌಕಾಯಾನ ಸ್ವಾತಂತ್ರ್ಯವನ್ನು ತುರ್ತಾಗಿ ಪುನಃಸ್ಥಾಪಿಸುವ ಅಗತ್ಯದ ಬಗ್ಗೆ ಒಪ್ಪಿಕೊಂಡಿದ್ದೇವೆ.
ಆ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ನಮ್ಮ ನಿಕಟ ಸಹಕಾರವನ್ನು ಮುಂದುವರಿಸುತ್ತೇವೆ.
@EmmanuelMacron”
*****
(रिलीज़ आईडी: 2252876)
आगंतुक पटल : 59
इस विज्ञप्ति को इन भाषाओं में पढ़ें:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam