ಹಣಕಾಸು ಸಚಿವಾಲಯ
azadi ka amrit mahotsav

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) 2026 ರ  ಜನವರಿ 1 ರಿಂದ ಅನ್ವಯವಾಗುವಂತೆ ಹೆಚ್ಚುವರಿ ಶೇ. 2 ರಷ್ಟು ನೀಡಲು ಸಂಪುಟದ ಅನುಮೋದನೆ

प्रविष्टि तिथि: 18 APR 2026 3:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಶೇ. 2 ರಷ್ಟು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಇದು 2026 ರ ಜನವರಿ 1 ರಿಂದ ಅನ್ವಯವಾಗಲಿದ್ದು ಮೂಲ ವೇತನ/ಪಿಂಚಣಿಯ ಪ್ರಸ್ತುತದ ಶೇ.58 ದರಕ್ಕೆ ಹೆಚ್ಚುವರಿಯಾಗಿ ಸಿಗಲಿದೆ.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ 6791.24 ಕೋಟಿ ರೂ.ಗಳ ಹೊರೆ ಬೀಳಲಿದೆ. ಇದರಿಂದ ಸುಮಾರು 50.46 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.27 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನಾಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ.

 

*****


(रिलीज़ आईडी: 2253289) आगंतुक पटल : 132
इस विज्ञप्ति को इन भाषाओं में पढ़ें: English , Urdu , Marathi , हिन्दी , Punjabi