ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ; ಅವರ ಯೋಗಕ್ಷೇಮ ವಿಚಾರಿಸಿದರು

प्रविष्टि तिथि: 19 APR 2026 10:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.

ಶ್ರೀ ಪವನ್ ಕಲ್ಯಾಣ್ ಅವರು ಅತ್ಯಂತ ಧೈರ್ಯಶಾಲಿ ವ್ಯಕ್ತಿ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ಶ್ಲಾಘಿಸಿ, ಅವರು  ಶೀಘ್ರದಲ್ಲೇ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.

ಪ್ರಧಾನ ಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಅತ್ಯಂತ ಧೈರ್ಯಶಾಲಿ ವ್ಯಕ್ತಿ, ಅವರು ಬೇಗನೆ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಾರೆ ಎಂಬುದು ನನ್ನ ನಂಬಿಕೆ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.

@PawanKalyan”
 

 

*****


(रिलीज़ आईडी: 2253544) आगंतुक पटल : 55
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Telugu